ಚಿಕ್ಕಬಳ್ಳಾಪುರ: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಒಳಪಡಿಸಬೇಕೆಂದು ಒತ್ತಾಯಿಸಿ ಡಿಎಚ್‌ಒ ಡಾ.ಮಹೇಶ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ,ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸೌಲಭ್ಯವನ್ನು ಪಡೆಯಲು ಆರೋಗ್ಯ ಇಲಾಖೆ ಜೊತೆ ನೋಂದಾಯಿಸಲು ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜಂಟಿ ಸಮಾಲೋಚನಾ ಸಭೆಯನ್ನು ನಡೆಸಬೇಕೆಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ..? ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ.ಬಾಲರಾಜ್,ರಾಜ್ಯ ಪರಿಷತ್ ಸದಸ್ಯರಾದ ವಿ.ಅಮರ್ ಮತ್ತು ಇತರರು ಇದ್ದರು.
ಖಾಸಗಿ ಆಸ್ಪತ್ರೆಗಳ ಸಭೆ ನಡೆಸಲು ಒತ್ತಾಯ
Date:
ಪೋಸ್ಟ್ ಹಂಚಿಕೊಳ್ಳಿ:




