ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

Date:

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ ಕಾರ್ಯಕ್ರಮದ ಪರಂಪರೆಯನ್ನು ಮುಂದುವರೆಸುವ ಸಲುವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಬಿಳ್ಳುರು ಹಾಗು ರಾಶ್ಚೆರುವು ಗ್ರಾಪಂ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮಗಳ ಪೂರ್ವಬಾವಿಯಾಗಿ ಚರ್ಚಿಸಲು ಏರ್ಪಡಿಸಿದ್ದ ಬಾಗೇಪಲ್ಲಿ ಹಾಗು ಚೇಳೂರು ತಾಲ್ಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜನಸ್ಪಂಧನ ಕಾರ್ಯಕ್ರಮಗಳು ಹೆಚ್ಚು ಜನರು ಸೇರುವ ಜಾತ್ರೆಗಳಂತೆ ಇರಬಾರದು. ಇಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಸ್ಥಳವಾಗಬೇಕು. ಈ ಹಿಂದಿನ ಎಲ್ಲಾ ಜನಸ್ಪಂಧನ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಹೋಗುತ್ತಿರುವುದರಿಂದ ಜನಸ್ಪಂಧನ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವಬಂದಿದೆ. ಈಗ ಬಿಳ್ಳೂರು ಮತ್ತು ರಾಶ್ಚೆರುವು ಗ್ರಾಪಂಗಳ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮಗಳಲ್ಲಿ ವಿವಿದ ಇಲಾಖೆಗಳಿಂದ ಕನಿಷ್ಠ 2 ಸಾವಿರ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡಬೇಕಾಗಿದೆ. ನಿಮ್ಮ ಜೊತೆಯಲ್ಲಿ ನನ್ನ ಆಪ್ತ ಸಿಬ್ಬಂದಿಯೂ ಬರುತ್ತಿದ್ದು ಪ್ರತಿ ಮನೆಗೂ ಬೇಟಿ ನೀಡಿ ಜನಸಾಮಾನ್ಯರಿಗೆ ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡು ಅವುಗಳನ್ನು ಜನಸ್ಪಂಧನ ಕಾರ್ಯಕ್ರಮದಲ್ಲಿ ವಿತರಿಸಲು ಪ್ರಮಾಣಿಕ ಪ್ರಯತ್ನವನ್ನು ಮಾಡಬೇಕಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಅನೇಕರು ಸರ್ಕಾರಿ ಕಚೇರಿಗಳನ್ನು ನೋಡದಂತಹವರು ಇದ್ದಾರೆ, ಅಧಿಕಾರಿಗಳ ನಿರ್ಲಕ್ಷದಿಂದ ಕೆಲವರು ಅನಗತ್ಯವಾಗಿ ಅಲೆದಾಟವನ್ನು ಮಾಡುತ್ತಿರುತ್ತಾರೆ. ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನರ ಅಲೆದಾಟ ತಪ್ಪಬೇಕು,ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದು ಸುಲಭವಾಗಿ ಅರ್ಹರಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ನಾವೆಲ್ಲರೂ ಶ್ರಮಿಸಬೇಕು ಇದರ ನಂತರ ಮಿಟ್ಟೇಮರಿ ಮತ್ತು ಕಾನಗಮಾಕಲಪಲ್ಲಿ ಗ್ರಾಪಂ ವ್ಯಾಪ್ತಿಯ ಜನಸ್ಪಂಧನ ಕಾರ್ಯಕ್ರಮ ನಡೆಯಲಿದೆ ಎಂದರು.

ಇದನ್ನು ಓದಿದ್ದೀರಾ..? ನೀರಿಗಾಗಿ ನಡೆಯುತ್ತಿರುವ ಧರ್ಮ ಯುದ್ಧವಿದು. ನಾವು ಪಾಂಡವರ ಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ.

ಸಭೆಯಲ್ಲಿ ಬಾಗೇಪಲ್ಲಿ ತಹಶೀಲ್ದಾರ್ ಮನೀಷ್ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ. ಶ್ವೇತ, ತಾಪಂ ಇಓ ಜಿ.ವಿ.ರಮೇಶ್, ಬಿಇಓ ಎನ್.ವೆಂಕಟೇಶಪ್ಪ, ಬಿಸಿಎಂ ಅಧಿಕಾರಿ ಆರ್.ಶಿವಪ್ಪ, ಸಿಡಿಪಿಓ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಪ್ರೀತಂ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಮೆಹಬೂಬ್ ಬಾಷ,ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...