ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

Date:

ಬಾಗೇಪಲ್ಲಿ:- ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸೆಂಬರ್‌.1ರಿಂದ ಬೆಂಗಳೂರು, ತುಮಕೂರು, ಮಂಡ್ಯ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ ಕೈಗೊಳ್ಳಲಾಗಿದೆ.

ಜಿಲ್ಲಾ ಉಪಾಧ್ಯಕ್ಷ ಮುಸ್ತಫಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡಬೇಕು. ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಬಿಸಿಯೂಟ ನೌಕರರ ವೇತನ ಹೆಚ್ಚಿಸುವುದರ ಜೊತೆಗೆ ಆರು ಗಂಟೆ ಕೆಲಸದ ಅವಧಿ ಸಂಬಂಧ ಆದೇಶ ಹೊರಡಿಸಬೇಕು. ಅಡುಗೆ ಮಾಡುವ ಸಂದರ್ಭದಲ್ಲಿ ಆಗುವ ಅವಘಡಗಳಿಗೆ ಇರುವ ಪರಿಹಾರ ಹೆಚ್ಚಿಸಿ, ಆರೋಗ್ಯ ವಿಮೆಯ ಸೌಲಭ್ಯ ನೀಡಬೇಕು. ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ಶ್ರಮಶಕ್ತಿ ನೀತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು’ ಎಂದು ಅಕ್ಷರದಾಸೋಹ ನೌಕರರ ಕಾರ್ಯದರ್ಶಿ ಅಮರಾವತಿ ಆಗ್ರಹಿಸಿದರು.

ಆನ್‌ಲೈನ್‌ನಲ್ಲಿ ದಾಖಲಾತಿ ಮಾಡುವ ಸಲುವಾಗಿ ಸ್ಮಾರ್ಟ್‌ ಫೋನ್‌ ನೀಡಬೇಕು. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ₹15 ಸಾವಿರ ವೇತನ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಖಜಾನೆ ಖಾಲಿ ಎನ್ನುವ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ: ಸಿ.ಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ರಾಮಾಂಜನಮ್ಮ,ಸರಿತಾ,ಉಮಾ,ಅನಿತಾ,ಆದಿಲಕ್ಷ್ಮಮ್ಮ,ಪಾರ್ವತಮ್ಮ, ನಾಗರತ್ನಮ್ಮ,ಆಯಿಷಾ,ಶೋಭಾ ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...