ದಾವಣಗೆರೆ | ಭದ್ರಾ ನೀರು ನಿಲ್ಲಿಸದಂತೆ ರೈತರ ಮನವಿ; ಡಿಸಿಎಂಗೆ ಸಚಿವರ ಒತ್ತಾಯ

Date:

ಭದ್ರಾ ಅಣೆಕಟ್ಟೆಯಿಂದ 100 ದಿನಗಳ ಕಾಲ ಸತತ ನೀರು ಹರಿಸುವಂತೆ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಸರ್ಕಾರವನ್ನು ಒತ್ತಾಯಿಸಿದಾರೆ.

ಭದ್ರಾ ಅಣೆಕಟ್ಟೆಯಿಂದ ಬಲ ಮತ್ತು ಎಡ ದಂಡೆ ನಾಲೆಗೆ ಸತತವಾಗಿ 100 ದಿನ ನೀರು ಹರಿಸಬೇಕೆಂದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಕೇಳಿಕೊಂಡಿದ್ದಾರೆ.

ದಾವಣಗೆರೆಯ ತಮ್ಮ ನಿವಾಸದಲ್ಲಿ ರೈತರ ಅಹವಾಲು ಸ್ವೀಕರಿಸಿ ಅವರು ಸರ್ಕಾರಕ್ಕೆ ಈ ಬೇಡಿಕೆ ಸಲ್ಲಿಸಿದರು. ಹರಿಹರ ಶಾಸಕ ಬಿ.ಪಿ. ಹರೀಶ, ಮಾಜಿ ಶಾಸಕ ಎಸ್. ರಾಮಪ್ಪ ಹಾಗೂ ರೈತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನೂರಾರು ರೈತರ ಸಚಿವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಹ ಆಗಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕೂಡಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ದೂರವಾಣಿ ಕರೆ ಮಾಡಿ, ಯಾವುದೇ ಕಾರಣಕ್ಕೂ ಭದ್ರಾ ಡ್ಯಾಂನಿಂದ ನೀರು ನಿಲ್ಲಿಸಬಾರದು ಎಂದು ಕೇಳಿಕೊಂಡರು.

ಶೇ.70ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶ ದಾವಣಗೆರೆ ಜಿಲ್ಲೆಯೊಂದರಲ್ಲೇ ಇದೆ. ನೂರುದಿನ ನೀರು ಹರಿಯುತ್ತದೆ ಎಂಬ ಕಾರಣಕ್ಕೆ ಜಿಲ್ಲೆಯ ರೈತರು ಭತ್ತ ನಾಟಿ ಮಾಡಿದ್ದಾರೆ. ಆದರೆ, ಏಪ್ರೀಲ್‌ 16ರಿಂದ ಪ್ರತಿ ಹತ್ತು ದಿನಕ್ಕೊಂದು ಬಾರಿಯ ಸರದಿಯಲ್ಲಿ ನೀರು ಹರಿಸಲಾಗುತ್ತಿದೆ. ಹೀಗೆ ಮಧ್ಯಂತರ ನೀರು ನಿಲುಗಡೆ ಮಾಡಿದರೆ ರೈತರು ಎಲ್ಲಿಗೆ ಹೋಗಬೇಕು? ಏನು ಮಾಡಬೇಕು? ಭದ್ರಾ ಕಾಡಾ ಸಮಿತಿ ನಿರ್ಧಾರ ಏಕಪಕ್ಷೀಯವಾಗಿದ್ದು, ಇದರಿಂದ ದಾವಣಗೆರೆ ಸೇರಿದಂತೆ ಭದ್ರಾ ಎಡ ಮತ್ತು ಬಲದಂಡೆ ನಾಲೆಗಳ ರೈತರಿಗೆ ಸಂಕಷ್ಟ ಬಂದೊದಗಲಿದೆ ಎಂದು ಸಚಿವರು ಈ ವಿಷಯವನ್ನು ಡಿಸಿಎಂ ಗಮನಕ್ಕೆ ತಂದರು.

ಸಚಿವರ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಯಾವುದೇ ಕಾರಣಕ್ಕೂ ನಾಲೆಯಲ್ಲಿ ನೀರು ನಿಲ್ಲಿಸುವುದಿಲ್ಲ. ಈ ಬಗ್ಗೆ ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕಾಡಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ,” ನೀರಿನ ಸಮಸ್ಯೆ ಆಗಬಾರದೆಂಬ ಕಾರಣಕ್ಕೆ ಮಧ್ಯಂತರ ನೀರು ನಿಲುಗಡೆಗೆ ಕ್ರಮ ಕೈಗೊಂಡಿದ್ದೇವೆ. ಕುಡಿಯುವ ನೀರಿಗಾಗಿ ನೀರು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ,” ಎಂದಿದ್ದಾರೆ.  ಸಚಿವ ಎಸ್.ಎಸ್. ಮಲ್ಲಿಕಾರ್ಜುನ,  ಮಧು ಬಂಗಾರಪ್ಪನವರಿಗೆ, “ಹರಿಸಬೇಕಿರುವ 2,650 ಕ್ಯೂಸೆಕ್ ನೀರಿನಲ್ಲಿ 500 ಕ್ಯೂಸೆಕ್ ನೀರು ಕಡಿಮೆ ಮಾಡಿ. ಆದರೆ, ನೀರು ನಿಲ್ಲಿಸಬೇಡಿ. ಡಿಸಿಎಂ ಜೊತೆಗೂ ಚರ್ಚಿಸಿದ್ದೇನೆ,” ಎಂದು  ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...