ನಾಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಮೃತ ಹಸ್ತದಿಂದ ಸೇತುವೆಗಳ ಲೋಕಾರ್ಪಣೆ: ಶಾಸಕಿ ಎಂ.ರೂಪಕಲಾ

Date:

ಬೇತಮಂಗಲ : ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ನಲ್ಲೂರು ಗ್ರಾಮದ ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಪಾಲಾರ್ ಹೊಳೆಗೆ ಹೊಸದಾಗಿ ನಿರ್ಮಾಣವಾಗಿರುವ ಸೇತುವೆಯ ಕಾಮಗಾರಿಗಳ ಲೋಕಾರ್ಪಣೆಯ ಸಿದ್ಧತೆಯನ್ನು ಶಾಸಕಿ ಎಂ.ರೂಪಕಲಾ ರವರು ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಲ್ಲೂರು- ನಿತ್ಯ ಗ್ರಾಮಗಳ ನಡುವೆ ಬೇತಮಂಗಲ ಕೆರೆಗೆ ನೀರು ಹರಿಯುವ ಹೊಳೆಗೆ ಹಾಲಿ ಇರುವ ಸೇತುವೆಯು ತೀರಾ ಕೆಳ ಮಟ್ಟದಲ್ಲಿದ್ದು ಮಳೆಗಾಲದಲ್ಲಿ ಸೇತುವೆಯ ಮೇಲೆ ನೀರು ಹರಿಯುವುದರಿಂದ ಹಳ್ಳಿಗಳಿಗೆ ಸಂಪರ್ಕ ಕಡಿತಗೊಳ್ಳುತ್ತಿರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೂಲಿ ಕಾರ್ಮಿಕರಿಗೆ ತೀರಾ ತೊಂದರೆಯಾಗುತ್ತಿತ್ತು.

ಇಲ್ಲಿನ ಸ್ಥಳೀಯರು ಸೇತುವೆ ಎತ್ತರಿಸಲು ಮನವಿ ಮಾಡಿದ್ದು ಹೊಸದಾಗಿ ಎರಡು ಸೇತುವೆ ನಿರ್ಮಾಣ ಮಾಡಲು ರೂ.6.00 ಕೋಟಿ, ಬಡಮಾಕನಹಳ್ಳಿ ಬಳಿ ಒಂದು ಸೇತುವೆ ಹಾಗೂ ಸಂಪರ್ಕ‌ ರಸ್ತೆಗೆ 4 ಕೋಟಿ ರೂ ಸೇರಿ ಒಟ್ಟು 10 ಕೋಟಿ ರೂಪಾಯಿ ಅನುದಾನವನ್ನು ಲೋಕೋಪಯೋಗಿ ಸಚಿವರನ್ನು ಕೋರಿ ಮಂಜೂರು ಮಂಡಿಸಲಾಗಿದ್ದು ಕಾಮಗಾರಿ ಪೂರ್ಣಗೊಂಡಿದ್ದು ಬುಧವಾರ ಲೋಕಾರ್ಪಣೆಗೊಳ್ಳಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿ ಸೇತುವೆ ನಿರ್ಮಾಣದಿಂದ ತಾಲೂಕಿನ ಹಲವು ಗ್ರಾಮಗಳು ಹಾಗೂ ಆವಣಿ ವರೆಗೆ ಸುಮಾರು 20 ಹಳ್ಳಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಲೋಕಾರ್ಪಣೆ ಸಿದ್ದತೆ ನಡೆಯುತ್ತಿದೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ರವರ ಅಮೃತ ಹಸ್ತದಿಂದ ನಾಳೆ ಲೋಕಾರ್ಪಣೆಗೊಳಿಸಲಿದ್ದು ಇಡೀ ಕ್ಷೇತ್ರ ಜನತೆ ವಿಶೇಷವಾಗಿ ಸ್ಥಳೀಯ ಗ್ರಾಮಗಳ ಸಾರ್ವಜನಿಕರು ಈ ಶುಭ ಸಂದರ್ಭದಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವೀ ಗೊಳಿಸಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಇದನ್ನು ಓದಿದ್ದೀರಾ..?ವಾಲ್ಮೀಕಿ ಜಯಂತಿ ಪ್ರಯುಕ್ತ ಪ್ರತಿಭಾ ಪುರಸ್ಕಾರ

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್, ಇನಾಯತ್ ವುಲ್ಲಾ, ನಾರಾಯಣ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಗೊಲ್ಲಹಳ್ಳಿ ಮಂಜುನಾಥ್ ,ಬೇತಮಂಗಲ ವಿನೂ ಕಾರ್ತಿಕ್, ಹುಲ್ಕೂರು ಸೊಣಮ್ಮ ರಮೇಶ್, ಕಮ್ಮಸಂದ್ರ ಮಾಜಿ ನಾಗರಾಜ್, ಕಾರಿ ಪ್ರಸನ್ನ, ದುರ್ಗಾಪ್ರಸಾದ್ ,ಸೊಸೈಟಿ ಅಧ್ಯಕ್ಷ ಕಳ್ಳಿಕುಪ್ಪ ವೆಂಕಟಾಚಲಪತಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೆಡ್ಡಿ, ಸದಸ್ಯ ವೇಣುಗೋಪಾಲ್, ಇಇ ರಾಮಮೂರ್ತಿ ,ಎಇಇ ರಾಜಶೇಖರ್, ಗುತ್ತಿಗೆದಾರರಾದ ವೆಂಕಟರಮಣ ಗೌಡ, ಮುಖಂಡರಾದ ಸುರೇಂದ್ರ ಗೌಡ, ಶಂಕರ್, ಬ್ಯೌಟೇಗೌಡ, ವಕೀಲ ಪದ್ಮನಾಭ ರೆಡ್ಡಿ, ರಾಜಣ್ಣ , ನಿವೃತ್ತ ಶಿಕ್ಷಕ ವೆಂಕಟರಮಣ, ಸೂರಹಳ್ಳಿ ಪ್ರಸಾದ್ ರೆಡ್ಡಿ, ಬ್ಯಾಟರಾಯನಹಳ್ಳಿ ರಮೇಶ್, ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...