ಪುಷ್ಪ ಶೈಲಿಯಲ್ಲಿ ಶ್ರೀಗಂಧ ಮರಗಳನ್ನು ಕದ್ದಿದ್ದ 8 ಜನರು ಅರೆಸ್ಟ್

Date:

ಚಿಂತಾಮಣಿ:ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು 8 ಜನ ಶ್ರೀಗಂಧದ ಕಳ್ಳತನದ ಆರೋಪಿಗಳನ್ನು ಬಂಧಿಸಿ,ಅವರಿಂದ 3.20 ಲಕ್ಷ ರೂ ಬೆಲೆ ಬಾಳುವ 32 ಕೆ.ಜಿಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂ 47 ರಲ್ಲಿರುವ ಶ್ರೀಗಂಧದ ಮರಗಳ ತೋಟದಲ್ಲಿ ಕಳ್ಳರು ಸುಮಾರು 1.5 ಲಕ್ಷ ರೂ ಬೆಲೆ ಬಾಳುವ 6 ಶ್ರೀಗಂಧದ ಮರಗಳನ್ನು ಕಟಾವು ಮಾಡಿ ಮರದ ಬುಡಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಜುಲೈ 22 ರಂದು ಮಾಲೀಕ ಖಲೀಲ್ ಬೇಗ್ ದೂರು ನೀಡಿದ್ದರು.

ಬೊಮ್ಮೆಪಲ್ಲಿ ಗ್ರಾಮದ ಸರ್ವೆ ನಂ 30/19 ರಲ್ಲಿರುವ ಶ್ರೀಗಂಧದ ಮರಗಳ ತೋಟದಲ್ಲಿ ಕಳ್ಳರು ಸುಮಾರು ಒಂದು ಲಕ್ಷ ರೂ ಬೆಲೆ ಬಾಳುವ 5 ಶ್ರೀಗಂಧದ ಮರಗಳನ್ನು ಕಟಾವು ಮಾಡಿ ಮರದ ಬುಡಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಮಾಲೀಕ ರಮೇಶ್ ಕಳೆದ ಜುಲೈ 24 ರಂದು ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಪ್ರಕರಣಗಳು ದಾಖಲಾಗಿದ್ದವು. ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ಡಿವೈಎಸ್ಪಿ ಮುರಳೀಧರ್,ಕೆಂಚಾರ್ಲಹಳ್ಳಿ ವೃತ್ತ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ಕಳ್ಳರ ಪತ್ತೆ ಮಾಡಲು ವಿಶೇಷ ಪತ್ತೆದಾರಿ ತಂಡವನ್ನು ರಚಿಸಲಾಗಿತ್ತು.

ವಿಶೇಷ ಪತ್ತೆದಾರಿ ತಂಡ ತೋಟಗಳಿಗೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಕಲೆ ಹಾಕಿ ವೈಜ್ಞಾನಿಕವಾಗಿ ತನಿಖೆ ಕೈಗೊಂಡಿದ್ದರು. ಸುತ್ತಮುತ್ತಲ ಸಿಸಿ ಕ್ರಾಮರಾಗಳ ಪರಿಶೀಲನೆ ಮತ್ತು ಕಳ್ಳತನದ ಶ್ರೀಗಂಧದ ಮಾರಾಟ ದಂಧೆಯ ಮೇಲೂ ಕಣ್ಣಿರಿಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಎ.ಹೊಸಹಳ್ಳಿ ಗ್ರಾಮದ ತೀರ್ಥಕುಮಾರ್ ಮತ್ತು ಮೂರ್ತಿ, ಮಾಯಸಂದ್ರ ಗ್ರಾಮದ ಗೌಸ್ ಪಾಷಾ ಮತ್ತು ಅಪ್ಸರ್ ಪಾಷಾ, ಅದೇ ತಾಲ್ಲೂಕಿನ ಬ್ಯಾಟರಹಳ್ಳಿ ಗ್ರಾಮದ ಮನೋಜ್, ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಕರಿಮಾರನಹಳ್ಳಿ ಗ್ರಾಮದ ಭರತ್ ಮತ್ತು ಶಿವ, ವಿಜಯನಗರದ ಏಜಾಜ್ ಬಂಧಿತ ಆರೋಪಿಗಳು.

ಇದನ್ನು ಓದಿದ್ದೀರಾ..? ಜಮಾತೆ ಇಸ್ಲಾಮಿ ಹಿಂದ್ ಕೋಲಾರ ವತಿಯಿಂದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಸನ್ಮಾನ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗಬಂಧನಕ್ಕೆ ಒಪ್ಪಿಸಲಾಗಿದೆ. ಬಟ್ಲಹಳ್ಳಿ ಪಿ.ಎಸ್.ಐ ಶಿವಕುಮಾರ್, ಸಿಬ್ರಬಂದಿ ಮಂಜುನಾಥ್, ವೆಂಕಟೇಶ್, ಪ್ರವೀಣ್ ಕುಮಾರ್, ನವೀನ್ ಕುಮಾರ್ ಪತ್ತೆದಾರಿ ತಂಡದಲ್ಲಿದ್ದರು. ಬಟ್ಲಹಳ್ಳಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಕುಶಾಲ್ ಚೌಕ್ಸೆ ಮತ್ತು ಹೆಚ್ಚುವರಿ ಎಸ್ಪಿ ಜಗನ್ನಾಥರೈ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...