ಪೌರ ಕಾರ್ಮಿಕರ ವೇತನ ಬಿಡುಗಡೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ

Date:

ಕೋಲಾರ: ನಗರಸಭೆಯ ಹೊರ ಗುತ್ತಿಗೆ ಪೌರ ಕಾರ್ಮಿಕರ 9 ತಿಂಗಳ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ನಗರಸಭೆ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೋಲಾರ ನಗರಸಭೆ ವ್ಯಾಪ್ತಿಯಲ್ಲಿ ಕಸವನ್ನು ಮನೆಗಳಿಂದ ಸಂಗ್ರಹಿಸುವವರು, ಟ್ರಾಕ್ಟರ್, ಆಟೋಗಳಿಗೆ ತುಂಬುವ ಲೋಡರ್, ಕಸ ವಾಹನ ಚಾಲಕರು, ಮತ್ತು ಒಳಚರಂಡಿಗಳಲ್ಲಿ ಮಲ-ಮೂತ್ರಗಳನ್ನು ತೆರವುಗೊಳಿಸಿಸುವ ಸ್ವಚ್ಚ ಮಾಡುವವರು ಯು.ಜಿ.ಡಿ ಸಿಬ್ಬಂದಿ, ಕಸ ವಿಂಗಡಿಸುವವರು. ಲ್ಯಾಂಡ್ ಫಿಲ್ಡ್ ಕಾರ್ಮಿಕರಿಗೆ ಸುಮಾರು 9 ತಿಂಗಳ ವೇತನ ಬಾಕಿ ಇದ್ದು, ಇವರ ವೇತನವನ್ನು ತಕ್ಷಣ ಪಾವತಿ ಮಾಡಬೇಕೆಂದು ಒತ್ತಾಯಿಸಿದರು

ಕೋಲಾರ ನಗರಸಭೆಯಲ್ಲಿ ಸ್ವಚ್ಚತೆ, ನೈರ್ಮಲ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ಇವರಿಗೆ ಸಕಾಲಕ್ಕೆ ವೇತನ ನೀಡದೇ ದುಡಿಸಿಕೊಳ್ಳುತ್ತಿರುವುದು ಅಮಾನವೀಯ ತಿಂಗಳ ಪೂರ್ತಿ ದುಡಿದರೂ ವೇತನ ಕೈಗೆ ಬರದೇ ಇರುವುದರಿಂದ, ವಾರದ ತಿಂಗಳ ಬಡ್ಡಿಗೆ ಸಾಲ ಮಾಡಿ. ಕುಟುಂಬಗಳ ಘೋಷಣೆ ಮಾಡುವಂತಾಗಿದೆ 9 ತಿಂಗಳ ವೇತನ ಬಾಕಿ ಇದೆ ಸರ್ಕಾರದ ಸೂಚನೆಯಂತೆ ಪ್ರತಿ ತಿಂಗಳು ವೇತನವನ್ನು ಕಡ್ಡಾಯವಾಗಿ ಬಿಡುಗಡೆ ಮಾಡಬೇಕಾಗಿದ್ದರೂ ತಿಂಗಳಾನುಗಟ್ಟಲೇ ಬಿಡುಗಡೆ ಮಾಡಿಲ್ಲ ಈ ಬಗ್ಗೆ ಅಧಿಕಾರಿಗಳಿಗೆ ಹಲವಾರು ಮನವಿ ಮಾಡಿದಾಗ ಸಮರ್ಪಕವಾಗಿ ಸ್ಪಂದಿಸದೇ, ಇಷ್ಟ ಇದ್ದರೇ ಮಾಡಿ, ಇಲ್ಲವೇ ಕೆಲಸ ಬಿಟ್ಟು ಹೋಗಿ ಎಂದು ಬೇಜಾವಾಬ್ದಾರಿಯಾಗಿ ಮಾತನಾಡುವುದು ಖಂಡನೀಯ ಎಂದು ಆರೋಪಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಎಲ್ಲಾ ಹೊರ ಗುತ್ತಿಗೆ ಪೌರ ಕಾರ್ಮಿಕರಿಗೆ ಗುರುತಿನ ಚೀಟಿ, ಭವಿಷ್ಯ ನಿಧಿ ಮತ್ತು ಇಎಸ್‌ಐ ಹಣವನ್ನು ಪಾವತಿ ಮಾಡುತ್ತಿರುವ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಬೇಕು ಕಾರ್ಮಿಕರಿಗೆ ವರ್ಷಕ್ಕೆ ಎರಡು ಜೊತೆ ಸಮವಸ್ತ್ರವನ್ನು ನೀಡಬೇಕು ಎಲ್ಲಾ ಹೊರ ಪೌರ ಗುತ್ತಿಗೆ ಕಾರ್ಮಿಕರಿಗೆ ಗೌಸ್, ಮಾಸ್ಕ್, ಗಮ್ ಬೂಟ್ಸ್ ಸೇರಿದಂತೆ ಸುರಕ್ಷಾ ಕಿಟ್‌ಅನ್ನು ಪ್ರತಿ ವರ್ಷ ನೀಡಬೇಕು ವಾರದ ರಜೆ, ರಾಷ್ಟ್ರೀಯ ಹಬ್ಬಗಳು ರಜಾ ದಿನವನ್ನು ನೀಡಬೇಕು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಎರಡು ತಿಂಗಳಿಗೊಮ್ಮೆ ನಡೆಸಬೇಕು ಸೇವೆಯಲ್ಲಿ ಇದ್ದ ಸಂದರ್ಭದಲ್ಲಿಯೇ ಮೃತಪಟ್ಟರೇ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆ.ಬಿ ಕೃಷ್ಣಪ್ಪ ಮಾತನಾಡಿ ಹೊರ ಗುತ್ತಿಗೆ ಪೌರ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನೇರ ಪಾವತಿ ಅಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಕುಮಾರ್, ದಿನೇಶ್‌ರವರು ಇತ್ತೀಚೆಗೆ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಖಾಯಂ ಉದ್ಯೋಗ ನೀಡಬೇಕು, ಗ್ರಾಚ್ಯಟಿ ಬಿಡುಗಡೆ ಮಾಡಿ ಕಾರ್ಮಿಕರು ಕೆಲಸವನ್ನು ಸ್ಥಗಿತಗೊಳಿಸಿ ನಗರಸಭೆ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಹೋರಾಟವನ್ನು ನಡೆಸಲಾಗುತ್ತಿದೆ. ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಜಾತಿ ವ್ಯವಸ್ಥೆಯ ವಿರುದ್ದ ಕನಕದಾಸರು ಕೆಲಸ ಮಾಡಿದ್ದಾರೆ: ಕೆ.ವಿ ಪ್ರಭಾಕರ್

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಂಜುನಾಥ್
ಪೌರ ಕಾರ್ಮಿಕರ ಸಂಘದ ಮುಖಂಡರಾದ ಮಂಜುನಾಥ್ ಜಿ, ಕಿರಣ್ ಕುಮಾರ್, ಜಗದೀಶ್, ರಾಮ, ಆನಂದ್, ನರೇಶ್,‌ ರಾಜೇಶ್,‌ ಪ್ರಶಾಂತ್, ಲೋಕೇಶ್,‌ ನಾಗಮಣಿ, ರೂಪ, ವನಿತಾ, ಧನಲಕ್ಷ್ಮೀ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...