ಪ್ಲಾಸ್ಟಿಕ್ ತಯಾರಿಕಾ ಘಟಕದ ಮೇಲೆ ಪುರಸಭೆ ದಾಳಿ – 450 ಕೆಜಿ ಪ್ಲಾಸ್ಟಿಕ್ ವಶ

Date:

ಶ್ರೀನಿವಾಸಪುರ: ಸರ್ಕಾರ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಸಹ, ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ತಯಾರಿಕೆ ಮತ್ತು ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಪುರಸಭೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ.

ಪಟ್ಟಣದ ಇಂದಿರಾ ನಗರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆ ಹಾಗೂ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸುಮಾರು 450 ಕೆಜಿಗೂ ಅಧಿಕ ತೂಕದ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳು, ತಟ್ಟೆಗಳು ಹಾಗೂ ಲೋಟಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪುರಸಭೆ ಅಧಿಕಾರಿಗಳು ಈ ಹಿಂದೆಯೇ ಹಲವು ಬಾರಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ಮಾಡಿ ಎಚ್ಚರಿಕೆ ನೀಡಿದ್ದರು.

ಇದನ್ನು ಓದಿದ್ದೀರಾ..? ಪೂರ್ವ ಕಾಲದಿಂದ ಉಳುಮೆ ಮಾಡುತ್ತಿದ್ದ ಜಮೀನಿಗೆ ಇತರರಿಂದ ಸರ್ವೆ ಕಾರ್ಯ:ಆರೋಪ

ಅಧಿಕಾರಿಗಳ ಎಚ್ಚರಿಕೆಯ ನಡುವೆಯೂ ಪ್ಲಾಸ್ಟಿಕ್ ಮಾರಾಟ ಮತ್ತು ಸಂಗ್ರಹಣೆ ಅವ್ಯಾಹತವಾಗಿ ಮುಂದುವರಿದ ಹಿನ್ನೆಲೆಯಲ್ಲಿ ಈ ದಾಳಿ ಸಂಘಟಿಸಲಾಗಿತ್ತು.”ಯಾವುದೇ ಕಾರಣಕ್ಕೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಮಾಡಬಾರದು. ಒಂದು ವೇಳೆ ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ವರ್ತಕರಿಗೆ ಹಾಗೂ ವ್ಯಾಪಾರಿಗಳಿಗೆ ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಪರಿಸರ ರಕ್ಷಣೆ ಮತ್ತು ಸರ್ಕಾರದ ಆದೇಶ ಪಾಲನೆಯ ದೃಷ್ಟಿಯಿಂದ ಪುರಸಭೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...