ಬೆಂಗಳೂರು | ಪುನೀತ್ ಕೆರೆಹಳ್ಳಿ ಬಿಡುಗಡೆ, ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

Date:

ಪುನೀತ್ ಕೆರೆಹಳ್ಳಿ ಬಿಡುಗಡೆ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ,” ಎಂದು ಆರೋಪಿಸಿದ್ದಾರೆ.

“ಹಲವು ಸಮಾಜ ಘಾತುಕ ಕೃತ್ಯ, ಕೊಲೆ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ, ಅಲ್ಪಸಂಖ್ಯಾತರಿಗೆ ಬಹಿರಂಗ ಸವಾಲು ಹಾಕಿದ ಒಬ್ಬ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಕೆಲವು ಪ್ರಕರಣಗಳಿವೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಪುನೀತ್‌ ಕೆರೆಹಳ್ಳಿ ಮೇಲಿದೆ. ಇಷ್ಟಿದ್ದರೂ ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿದೆ. ಇದು ಅನ್ಯಾಯದ ನಡೆ,” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪಕ್ಷ, ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ, ಅಲ್ಪ ಸಂಖ್ಯಾತರ ರಕ್ಷಣೆ, ಕೋಮುವಾದಿಗಳಿಗೆ, ಸಮಾಜದಲ್ಲಿ ದ್ವೇಷ ಹರಡುವಂತಹವರಿಗೆ ಕಠಿಣ ಶಿಕ್ಷೆ ವಿಧಿಸುವ ಭಾಷಣಗಳನ್ನು ಮತ್ತು ಪತ್ರಿಕಾ ಹೇಳಿಕೆಗಳನ್ನ ನೀಡುತ್ತಲೇ ಇವೆ. ಆದರೆ, ಸರಕಾರದ ಈ ನಡೆ, ಅವರ ಮಾತಿಗೆ ತದ್ವಿರುದ್ದವಾಗಿದೆ. ಸರಕಾರದ ಭಾಷಣ, ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಅನುಷ್ಟಾನಕ್ಕೆ ಬರಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...