ಬೋನಾಫೈಡ್ ನಕಲಿ ಪ್ರಮಾಣಪತ್ರ ವಿಚಾರ ಚಿಂತಾಮಣಿ ಸೇರಿದಂತೆ ವಿವಿಧ ಕಡೆ ಲೋಕಾಯುಕ್ತ ದಾಳಿ

Date:

ಚಿಂತಾಮಣಿ:ಸಂಬಂಧವಿಲ್ಲದ ಮಾಲೀಕರ ಕೃಷಿ ಜಮೀನಿನ ಹೆಸರಲ್ಲಿ ಬೋನಾಫೈಡ್ ನಕಲಿ ಪ್ರಮಾಣಪತ್ರ ವಿತರಣೆ ಹಾಗೂ ಟ್ರ್ಯಾಕ್ಟರ್ ನೋಂದಣಿ ಪ್ರಕರಣ ಸಂಬಂಧ ಜಿಲ್ಲಾ ಲೋಕಾಯುಕ್ತ ಪೊಲೀಸರು ಕೋಲಾರ ಜಿಲ್ಲೆಯಲ್ಲಿ ಐದು ಕಡೆ ಹಾಗೂ ಚಿಂತಾಮಣಿಯಲ್ಲಿ ಒಂದು ಕಡೆ ಬೆಳಿಗ್ಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಜಿಲ್ಲಾ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಸುಮಾರು 1,387 ನಕಲಿ ಬೋನಾಫೈಡ್ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹ 2 ಕೋಟಿ ನಷ್ಟ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.ಈ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ..? ಕಾಂಗ್ರೆಸ್‌ ಕಛೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ

ನರಸಾಪುರ ನಾಡ ಕಚೇರಿಯ ಉಪ ತಹಶೀಲ್ದಾರ್ ನಾರಾಯಣಸ್ವಾಮಿ, ಹೊರಗುತ್ತಿಗೆ ಆಪರೇಟ‌ರ್ ಅಂಬುಜಾ, ಮಧ್ಯವರ್ತಿ ಮಂಜುನಾಥ್,ಚಿಂತಾಮಣಿಯ ಸಾಯಿ ಆದಿತ್ಯ ಟ್ರ್ಯಾಕ್ಟ‌ರ್ ಷೋರೂಂನ ಸೇಲ್ಸ್ ಮ್ಯಾನ್ ಗೋಕುಲ್ ರೆಡ್ಡಿ,ವ್ಯವಸ್ಥಾಪಕ ಆಂಜನೇಯರೆಡ್ಡಿ(ಕೋಲಾರ ನಗರ),ಆರ್ ಟಿ ಒ ಮಧ್ಯವರ್ತಿ ಅಶ್ವತ್ಥನಾರಾಯಣ ಅವರ ನಿವಾಸದ ಮೇಲೆ ದಾಳಿ ನಡೆದಿದೆ.ಶೋಧ ಕಾರ್ಯಾಚರಣೆ ಮುಂದುವರಿದಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...