ಚಿಕ್ಕಬಳ್ಳಾಪುರ: ಬಯಲುಸೀಮೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ, 2027 ಕ್ಕೆ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಮಿತ್ತನಹಳ್ಳಿಯ ಕಡೆಗೆ ಸಂಚರಿಸುವ ಸಂಪರ್ಕ ರಸ್ತೆಯನ್ನು ಪರಿಶೀಲನೆ ಮಾಡಿ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ-ಕೋಲಾರ ಮುಖ್ಯ ರಸ್ತೆಯಿಂದ ಮಿತ್ತನಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದ ಕಾರಣ, ರಸ್ತೆಯನ್ನು ವೀಕ್ಷಿಸಿದ್ದು, 1.6 ಕಿಮೀ. ದೂರದ ಆರ್.ಡಿ.ಪಿ.ಆರ್.ಗೆ ಸೇರಿರುವ ರಸ್ತೆಗೆ ಡಾಂಬರೀಕರಣ ಕಾಮಗಾರಿ ಶೀಘ್ರವಾಗಿ ಮಾಡಲಾಗುವುದು
ಎಂದು ತಿಳಿಸಿದರು.
ಎತ್ತಿನಹೊಳೆ ವಿಷಯವಾಗಿ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರುವಂತಹ ಕೆಲಸ ಮಾಡುತ್ತೇವೆ ಆದರೆ, ಈ ಯೋಜನೆಯಿಂದ ಬೇರೆ ಜಿಲ್ಲೆಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತಿದೆ, ವಾಣಿಜ್ಯ ಬೆಳೆಗಳನ್ನು ಬೆಳೆದು, ಇಡೀ ದೇಶಕ್ಕೆ ಅನ್ನ ಕೊಡುತ್ತಿರುವ ಜಿಲ್ಲೆಗಳಿಗೆ ನೀರಿನ ಕೊರತೆ ಕಾಡುತ್ತಿದೆ, 1200 ಅಡಿಗಳಿಂದ ನೀರು ಹೊರ ತೆಗೆಯುವ ಹರಸಾಹಸ ಮಾಡಬೇಕಾದಂತಹ ಸ್ಥಿತಿ ಬಂದಿದೆ ಈ ಕುರಿತು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೂ ತರಲಾಗಿದೆ ಎಂದು ಈ ವೇಳೆ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.
ಎಚ್.ಎನ್.ವ್ಯಾಲಿ ಯೋಜನೆಯಡಿ ಮೂರನೇ ಹಂತದಲ್ಲಿ 168 ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ, ಆದರೆ, ಎನ್.ಜಿ.ಟಿ.ಯು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಿ ನೀರು ಹರಿಸಬೇಕು ಎಂದು ನಿರ್ದೇಶನ ನೀಡಿದೆ, ಮೂರು ಹಂತದಲ್ಲಿ ಶುದ್ಧೀಕರಣವಾಗುತ್ತಿಲ್ಲ ಭವಿಷ್ಯದಲ್ಲಿ ಈ ಭಾಗದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..? ಊಲವಾಡಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ
ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬರಲಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜನರಿಗೆ ಆಗಲಿರುವ ತೊಂದರೆಯನ್ನು ತಪ್ಪಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ತಾದೂರು ರಘು,ಬಶೆಟ್ಟಿಹಳ್ಳಿ ನಾರಾಯಣಸ್ವಾಮಿ, ಚಂದ್ರು,ತಿಮ್ಮರಾಯಪ್ಪ ಮತ್ತು ಇತರರು ಹಾಜರಿದ್ದರು.
ಮಿತ್ತನಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭರವಸೆ: ಶಾಸಕ ಬಿ.ಎನ್.ರವಿಕುಮಾರ್
Date:
ಪೋಸ್ಟ್ ಹಂಚಿಕೊಳ್ಳಿ:




