ಮುಖ್ಯ ಶಿಕ್ಷಕಿ ಗೀತಾಗೆ ರಾಜ್ಯ ಮಟ್ಟದ ”ಅಪರ್ಣ ನಿರೂಪಣ ರತ್ನ” ಪ್ರಶಸ್ತಿ: ಅಭಿನಂದನೆ

Date:

ಬೇತಮಂಗಲ: ಸ್ಪಾರ್ಕ್ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ವತಿಯಿಂದ ಚೊಕ್ಕರ ಬಂಡೆ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಅಂತೋಣಿ ಅವರಿಗೆ “ಅಪರ್ಣ ನಿರೂಪಣ ರತ್ನ” ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದ್ದು ಕೆಜಿಎಫ್ ತಾಲೂಕು ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದೇವೇರಹಳ್ಳಿ ಎಂ. ನಾರಾಯಣಸ್ವಾಮಿ ಹಾಗೂ ಪದಾಧಿಕಾರಿಗಳು ಸಾಧಕಿ ಮುಖ್ಯ ಶಿಕ್ಷಕಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ವೇಳೆ ದೇವೇರಹಳ್ಳಿ ನಾರಾಯಣಸ್ವಾಮಿ ಮಾತನಾಡಿ, ಮುಖ್ಯ ಶಿಕ್ಷಕಿ ಗೀತಾ ಅವರು ಆಂಧ್ರ ಗಡಿಯ ಚೊಕ್ಕರ ಬಂಡೆ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು,‌ ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಸ್ಪಾರ್ಕ್ ಅಕಾಡೆಮಿ ಹಾಗೂ ಸೂರ್ಯ ಫೌಂಡೇಶನ್ ಸಂಸ್ಥೆಯವರು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಹಾಗೂ ಸನ್ಮಾನವನ್ನು ಮಾಡಿ ಗೌರವಿಸಿದೆ.

ಇದನ್ನು ಓದಿದ್ದೀರಾ..? ಗಡಿಯಲ್ಲಿ ಸೈನಿಕರು, ನಾಡಲ್ಲಿ ಪೊಲೀಸರು ದೇಶವನ್ನು ಕಾಯುತ್ತಿದ್ದಾರೆ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಟಿ.ಎಸ್.ರಾಮಲಿಂಗೇಗೌಡ

ಆದ್ದರಿಂದ ನಮ್ಮ ಕೆಜಿಎಫ್ ತಾಲೂಕು ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ದೇವೇರಹಳ್ಳಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಜಿಲ್ಲಾ ಪರಿಷತ್ ಸದಸ್ಯ ಶಂಕರ್ ,ಹಿರಿಯ ಉಪಾಧ್ಯಕ್ಷೆ ಸರಸ್ವತಿ ,ಮುರುಗೇಶ್, ಆಂಜನೇಯ ರೆಡ್ಡಿ ಹಾಗೂ ಎಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...