ವಾಣಿಜ್ಯ ಮಳಿಗೆಗೆ ಶಾಸಕಿ ಎಂ.ರೂಪಕಲಾ ಗುದ್ದಲಿ ಪೂಜೆ

Date:

ಬೇತಮಂಗಲ: ಬೇತಮಂಗಲ ಬಸ್ ನಿಲ್ದಾಣದಲ್ಲಿ ಗ್ರಾಮ ಪಂಚಾಯ್ತಿ ಹಳೆ ಕಟ್ಟಡದ ಜಾಗದಲ್ಲಿ ವಾಣಿಜ್ಯ ಮಳಿಗೆಗೆ ಶಾಸಕಿ ಎಂ.ರೂಪಕಲಾ ಗುದ್ದಲಿ ಪೂಜೆ ನೆರೆವೆರಿಸಿದರು.

ಈ ವೇಳೆ ಮಾತನಾಡಿದ ಬೇತಮಂಗಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀನುಕಾರ್ತಿಕ್ ಹಳೆ ಮದ್ರಾಸ್ ರಸ್ತೆ ಅಗಲಿಕರಣ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಕೆಡವಲಾಗಿತ್ತು ಆದ್ದರಿಂದ ನಗರದ ಹೃದಯ ಭಾಗದಲ್ಲಿ ಕಟ್ಟಡವಿರುವುದರಿಂದ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಬೇಕು ಎಂದು ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ನೀರ್ಣಾಯವನ್ನು ಅಂಗಿಕರಿಸಲಾಗಿತ್ತು .

ಈ ಹಿನ್ನಲೆಯಲ್ಲಿ ಇಧೀಗ ಕಟ್ಟಡದ ಗುದ್ದಲಿ ಪೂಜೆ ನೆರೆವೆರಿಸಲಾಗಿದ್ದು ಸೈಟ್ 3865 ಇದ್ದು 2560 ಜಾಗದಲ್ಲಿ ಕಟ್ಟಡ ನಿರ್ಮೀಸಲಾಗುತ್ತಿದೆ 12 ಲಕ್ಷ ವೆಚ್ಚದಲ್ಲಿ ಪಂಚಾಯ್ತಿಯ ವರ್ಗ 1 ರಲ್ಲಿ 12 ಲಕ್ಷ ಅನುದಾನದಲ್ಲಿ ಕಟ್ಟಡದ ಪಾಯ ಕೆಲಸ ಪ್ರಾರಂಭಿಸಲಾಗಿದ್ದು ಮುಂದಿನ ದಿನಗಳಲ್ಲಿ ಶಾಸಕರ ಅನುದಾನದಲ್ಲಿ ಕಟ್ಟಡವನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಬೇತಮಂಗಲ ಬಸ್ ನಿಲ್ದಾಣದ ಹಳೆ ಪಂಚಾಯ್ತಿ ಕಟ್ಟಡದ ಮುಂಭಾಗದಲ್ಲಿ ಆಟೋಗಳನ್ನು ನಿಲ್ಲಿಸಿಕೊಂಡು ನಮ್ಮ ಜೀವನ ಸಾಗಿಸುತ್ತಿದ್ದೇವು ಆದರೆ ಕೆಲವರು ಪೊಲೀಸರು ಇಲ್ಲಿ ನಿಲ್ಲಿಸುವುದು ಬೇಡವೆಂದು ಆಕ್ಷೇಪ ವ್ಯಕ್ತಪಡಿಸುತ್ತಿರುವುದರಿಂದ ನಾವು ನಮ್ಮ ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು ಎಂದು ತಿಳಿಯದೆ ದಿಕ್ಕು ತೋಚದ ಪರಿಸ್ಥಿತಿಯಲ್ಲಿ ಇದ್ದೇವೆ ಆದ್ದರಿಂದ ನಮಗೆ ಆಟೋ ನಿಲ್ಲಿಸಲು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಅಟೋ ಚಾಲಕರು ಶಾಸಕಿ ರೂಪಕಲಾಶಶಿಧರ್ ರವರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣ ಸ್ಪಂದಿಸಿದ ಶಾಸಕಿ ಆಟೋ ಚಾಲಕರು ಕಷ್ಟಪಟ್ಟು ದುಡಿಯುವ ವರ್ಗವಾಗಿರುವುದರಿಂದ ಅವರಿಗೆ ತೊಂದರೆ ನೀಡಬೇಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿ ಕೆಪಿಸಿಸಿ ಸದಸ್ಯ ದುರ್ಗಪ್ರಸಾದ, ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀನುಕಾರ್ಥಿಕ್ ಹಾಗೂ ಪೊಲೀಸ್ ಅಧಿಕಾರಿಗಳು ಆಟೋ ಚಾಲಕರು ಒಂದಾಗಿ ಸಭೆ ನಡೆಸಿ ಒಂದು ನಿರ್ಣಾಯಕ್ಕೆ ಬರಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್

ಈ ಗುದ್ದಲಿ ಪೂಜೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಅಲವೇಲಮ್ಮ , ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಅ.ಮು.ಲಕ್ಷ್ಮಿನಾರಾಯಣ, ಇನಾಯತ್, ನಾರಾಯಣ ಸ್ವಾಮಿ, ಎಪಿಎಂಸಿ ಸದಸ್ಯ ರಾಮಚಂದ್ರ, ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಮತ ಗಣೇಶ್(ಗನಿ)ಸದಸ್ಯರಾದ ಸುಕನ್ಯ, ಏಜಾಜ್ ಪಾಷಾ, ಡೇರಿ ಮಂಜು, ಆನಂದ್, ಓಂ ಸುರೇಶ್, ಸುರೇಂದ್ರ ಗೌಡ, ರಾಧಮ್ಮ, ರೇಣುಕಾ, ಜಯಮ್ಮ, ಅರ್ಬಿನ್, ಶ್ರೀನಿವಾಸ್, ಕಳ್ಳಿಕುಪ್ಪ ವೆಂಕಟಾ ಚಲಪತಿ, ಕೆಪಿಸಿಸಿ ಸದಸ್ಯ ದುರ್ಗಪ್ರಸಾಧ,ಶೇಷಾಧ್ರಿ ,ಕಮ್ಮಸಂದ್ರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ನಾಗರಾಜ್ ,ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಸಂತ್ ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...