ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

Date:

ಬೆಂಗಳೂರು ಗ್ರಾಮಾಂತರ : 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ, ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವೀರ ವನಿತೆ ಒನಕೆ ಓಬವ್ವ’ ಜಯಂತಿಯನ್ನು ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು. ಈ ಸಮಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ದಿನವಾಗಿದೆ. 18ನೇ ಶತಮಾನದಲ್ಲಿ ಚಿತ್ರದುರ್ಗದ ಪಾಳೆಗಾರ ಮದಕರಿ ನಾಯಕನ ಅರಮನೆಯ ಕಾವಲುಗಾರನ ಪತ್ನಿ ಓಬವ್ವ. ನೂರಾರು ಶತ್ರು ಸೈನಿಕರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ವೀರ ಮರಣವನ್ನಪ್ಪಿದ ಓಬವ್ವ ಅವರು ಎಲ್ಲಾ ಮಹಿಳೆಯರಿಗೆ ಇವರು ಸ್ಫೂರ್ತಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಯಿ ಚಾಮುಂಡಿ ತಾಯಿಯ ರೂಪ ತಾಳಿ ಒನಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ನೂರಾರು ಸೈನಿಕರನ್ನು ಬಡಿದ ಶಕ್ತಿಶಾಲಿ ಮಹಿಳೆ ಓಬವ್ವ. ಹಾಗಾಗಿ ಒನಕೆ ಓಬವ್ವ ಅವರ ರೀತಿಯಲ್ಲಿ ಇನ್ನೂ ಅನೇಕ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದನ್ನು ದೇಶದಾದ್ಯಂತ ತಿಳಿಸುವ ಪ್ರಯತ್ನ ಮಾಡಬೇಕು ಎಂದರು.

ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಯಾವ ರೀತಿ ಸಮಾಜದಲ್ಲಿ ಎಲ್ಲರೂ ಸಮನಾಗಿ ಬದುಕಲು, ಅದರಲ್ಲೂ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ಭಾಗವಹಿಸಲು ಸಂವಿಧಾನದಲ್ಲಿ ದಾರಿಮಾಡಿ ಕೊಟ್ಟರು, ಇಂತಹ ಮಹಾನ್ ವ್ಯಕ್ತಿಯನ್ನು ಸದಾ ನೆನೆಯುತ್ತಾ ಮುಂದೆ ಸಾಗೋಣ ಎಂದು ತಿಳಿಸಿದರು.

ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರು ಕೆಲವು ಸಮಸ್ಯೆಗಳ ಅಹವಾಲುಗಳನ್ನು ಸಚಿವರಿಗೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿರುವ ಸಮಸ್ಯೆಯನ್ನು ಆದಷ್ಟೂ ಬೇಗ ಪರಿಹರಿಸಲು ಸೂಚಿಸುತ್ತೇನೆ. ಹಾಗೇ ಇದುವರೆಗೆ ವಿದ್ಯುತ್ ಬಿಲ್ ಸುಮಾರು 11 ಲಕ್ಷವಾಗಿದ್ದು, ಅದನ್ನು ವಜಾ ಮಾಡಲು ತಿಳಿಸಿದ್ದೇನೆ. ಇನ್ನೂ ಒಂದು ತಿಂಗಳೊಳಗೆ ಜನರೇಟರ್ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಕೋರ್ಟ್ ಮೊರೆ ಹೊದ ಮಂಜುನಾಥ್ ಗೌಡರಿಗೆ ಬಾರಿ ಮುಖ ಭಂಗ ಆಗಿದೆ : ಶಾಸಕ‌ ನಂಜೇಗೌಡ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಸಿ ಜಗನ್ನಾಥ್, ಬಯಪ ಅಧ್ಯಕ್ಷರು ವಿ ಶಾಂತಕುಮಾರ್, ದೇವನಹಳ್ಳಿ ಪುರಸಭೆ ಅಧ್ಯಕ್ಷರು ಡಿ.ಎಂ ಮುನುಕೃಷ್ಣ, ಉಪಾಧ್ಯಕ್ಷ ಜಿ.ಎ ರವೀಂದ್ರ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ಮುನಿರಾಜು, ಸಹಾಯಕ ಪ್ರಾಧ್ಯಾಪಕ ಹಾಗೂ ಅಂಬೇಡ್ಕರ್ ವಾದಿ ಯುವ ಚಿಂತಕ ಸುರೇಶ್ ಗೌತಮ್, ಕಾರಹಳ್ಳಿ ಶ್ರೀನಿವಾಸ್, ಸಮುದಾಯದ ಮುಖಂಡರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...