ಸ್ವಂತ ಹಣದಿಂದ ನಗರಸಭೆ ಸದಸ್ಯ ಫೈರೋಜ್ ಖಾನ್ 200 ಮೀಟರ್‌ಗೂ ಹೆಚ್ಚು ಉದ್ದದ ಹೊಸ ಪೈಪ್‌ಲೈನ್ ವ್ಯವಸ್ಥೆ

Date:

ಕೋಲಾರ: ನಗರದ ವಾರ್ಡ್ ನಂ 16ರಲ್ಲಿ ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ತೊಂದರೆಯಿಂದ ಬಳಲುತ್ತಿದ್ದ ಅನ್ಸಾರ್ ಮೊಹಲ್ಲಾದ ನಿವಾಸಿಗಳಿಗೆ ಇದೀಗ ನೆಮ್ಮದಿಯ ನಗು ಮೂಡಿದೆ. ವಾರ್ಡ್‌ನ ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಫೈರೋಜ್ ಖಾನ್ ಅವರು ತಮ್ಮ ಸ್ವಂತ ಹಣದಿಂದಲೇ 200 ಮೀಟರ್‌ಗೂ ಹೆಚ್ಚು ಉದ್ದದ ಹೊಸ ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸಿ, ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಸಾಧ್ಯವಾಗುವಂತೆ ಮಾಡಿದ್ದಾರೆ.

ಸ್ಥಳೀಯರು ಕಳೆದ ಕೆಲವು ತಿಂಗಳಿನಿಂದ ನೀರಿನ ಅಭಾವದಿಂದ ತೀವ್ರ ಕಷ್ಟ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಗಮನಿಸಿದ ಸದಸ್ಯ ಫೈರೋಜ್ ಖಾನ್, ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಸ್ವಂತ ವೆಚ್ಚದಲ್ಲಿ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಕೈಗೊಂಡಿದ್ದಾರೆ. ಈಗ ಪ್ರದೇಶದ ಹಲವಾರು ಮನೆಗಳಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿದ್ದು, ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಫೈರೋಜ್ ಖಾನ್ ಅವರು ಮಾತನಾಡುತ್ತಾ, “ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಕ್ಷೇತ್ರದ ಜನಪ್ರಿಯ ಶಾಸಕರಾದ ಕೋತ್ತೂರ್ ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಅನೀಲ್ ಕುಮಾರ್ ರವರ ಮಾರ್ಗದರ್ಶನದಲ್ಲಿ ನಾನು ಜನೋಪಯೋಗಿ ಕಾರ್ಯಗಳಲ್ಲಿ ನಿರಂತರ ತೊಡಗಿಕೊಂಡಿದ್ದೇನೆ.
ವಾರ್ಡ್‌ನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಸಾಕಷ್ಟು ಅನುದಾನ ದೊರೆತಿದ್ದು, ಅದಕ್ಕೆ ಜೊತೆಯಾಗಿ ನನ್ನ ಸ್ವಂತ ಹಣದಿಂದಲೂ ಅನೇಕ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದೇನೆ. ಮುಂದೆ ಕೂಡಾ ನನ್ನ ವಾರ್ಡ್‌ನ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ,” ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಒಕ್ಕಲಿಗರ ಸಂಘ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ನಿಲ್ಲಬೇಕು.

ಸ್ಥಳೀಯ ನಿವಾಸಿಗಳು ಫೈರೋಜ್ ಖಾನ್ ಅವರ ಈ ಸೇವಾಭಾವವನ್ನು ಪ್ರಶಂಸಿಸಿದರು ಜನರ ಕಷ್ಟವನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳುವ ಜನಪರ ಜನಪ್ರತಿನಿಧಿ ಫೈರೋಜ್ ಖಾನ್. ನಾವು ಅವರ ಜೊತೆ ನಿಂತಿದ್ದೇವೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಾರ್ಡ್ ನಂ 16ರಲ್ಲಿ ನಡೆದ ಈ ಸ್ವಂತ ಹಣದ ಅಭಿವೃದ್ಧಿ ಕಾರ್ಯವು ಜನಪ್ರತಿನಿಧಿಗಳಲ್ಲಿ ಹೊಸ ಮಾದರಿಯಾಗಿದ್ದು, ಜನಸೇವೆ ಎಂದರೇನು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...