ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

Date:

ಹುಬ್ಬಳ್ಳಿಯ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತುಂಬಾ ದಿನಗಳಿಂದ ಸ್ಮಶಾನದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ವಾರ್ಡ್‌ ನಂಬರ್‌ 35ರ ನಿವಾಸಿಗಳು ಹಲವು ವರ್ಷಗಳಿಂದ ರೈತರೊಬ್ಬರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಸ್ಮಶಾನ ಭೂಮಿ ನೀಡಲು ಸಾಧ್ಯವಾಗಿಲ್ಲ.

ಸ್ಮಶಾನವಿಲ್ಲದೆ ಇಲ್ಲಿನ ಜನರಿಗೆ ತುಂಬಾ ತೊಂದರೆಯಾಗಿದ್ದು, ಮಳೆಗಾಲದಲ್ಲಿ ಈ ಸಮಸ್ಯೆ ಇನ್ನು ಉಲ್ಬಣವಾಗುತ್ತಿದೆ. ಗ್ರಾಮದಲ್ಲಿ ಸ್ಮಶಾನ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಎಷೇ ಒತ್ತಾಯಿಸಿದರೂ ಈವರೆಗೂ ಅವರ ಬೇಡಿಕೆ ಇಡೇರಿಲ್ಲ.

ಬೈರಿದೇವರಕೊಪ್ಪ ಮುಖ್ಯನಗರದಿಂದ 10 ಕಿಮೀ ನಷ್ಟು ದೂರವಿದೆ. ಕಳೆದ 40 ವರ್ಷಗಳಿಂದ ಈ ಜನರು ಇಲ್ಲಿ ವಾಸಮಾಡುತ್ತಿದ್ದಾರೆ. ಸುಮಾರು 20 ಸಾವಿರ ಕುಟುಂಬಗಳು ಇಲ್ಲಿ ವಾಸವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿನ ನಿವಾಸಿಗಳು ತಮ್ಮ ಜಾತಿ ಮತ್ತು ಧರ್ಮದ ವಿಧಿವಿಧಾನದ ಪ್ರಕಾರ ಶವಗಳನ್ನು ಹೂಳಲು ಮತ್ತು ಸುಡಲು ಯಾವುದೇ ಸೂಕ್ತ ಸೌಕರ್ಯವಿಲ್ಲ. ಸ್ಥಳದಲ್ಲಿ ಜನರಿಗೆ ಯಾವುದೇ ಆಶ್ರಯ, ಕುಡಿಯುವ ನೀರು ಹಾಗೂ ಹೆಚ್ಚಿನ ಜನ ಸೇರಲು ಜಾಗವಿಲ್ಲದೆ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡಿ ಎಂದು ಇಲ್ಲಿನ ನಿವಾಸಿಗಳು ಜಿಲ್ಲಾಡಳಿತ ಮತ್ತು ಎಚ್‌ಡಿಎಂಸಿ ಅಧಿಕಾರಿಗಳಿಗೆ ಕೆಳಿಕೊಂಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಯಾವೊಬ್ಬ ಅಧಿಕಾರಿಯೂ ಕ್ರಮ ಕೈಗೊಂಡಿಲ್ಲ ಎನ್ನುವುದು ಸ್ಥಳೀಯರ ಆರೋಪ.

ಗ್ರಾಮ ಲೆಕ್ಕಿಗರೂ ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಮಶಾನವಾಗಿಸಲು ಗ್ರಾಮದಲ್ಲಿ ಯಾವುದೇ ಸರ್ಕಾರಿ ಭೂಮಿ ಇಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಗ್ರಾಮದ ರೈತರು ಎಪಿಎಂಸಿಗೆ ತಮ್ಮ ಜಮೀನು ನೀಡಿದ್ದಾರೆ. ಆದರೆ, ಸ್ಮಶಾನಕ್ಕೆ ಭೂಮಿ ಇಲ್ಲ. ಗ್ರಾಮದ ಹತ್ತಿರ ಒಂದು ಕೆರೆಯಿದೆ. ಆ ಕೆರೆಯ ಸ್ಥಿತಿ ತುಂಬಾ ಕೆಟ್ಟಿದ್ದು ಆ ಜಾಗವನ್ನು ಸ್ಮಶಾನವನ್ನಾಗಿ ಪರಿವರ್ತಿಸಬಹುದು ಎಂದು ಗ್ರಾಮಸ್ಥರು ಸಲಹೆ ನೀಡುತ್ತಾರೆ.

ಕಾರ್ಪೊರೇಟರ್ ಮಲ್ಲಿಕಾರ್ಜುನ ಗುಂಡೂರು ಪತ್ರಿಕೆಗಳಿಗೆ ಮಾತನಾಡಿ, “ಸ್ಮಶಾನಕ್ಕೆ ಭೂಮಿ ಮಂಜೂರು ಮಾಡುವಂತೆ ಹುಬ್ಬಳ್ಳಿ ತಹಶೀಲ್ದಾರ್‌ಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಎಚ್‌ಡಿಎಂಸಿ ಆಯುಕ್ತರೊಂದಿಗೆ ಚರ್ಚಿಸುವೆ,” ಎಂದಿರುವ ಅವರು ಸರ್ಕಾರದ ಮೇಲೆ ಒತ್ತಡ ಹೇರುವ ಭರವಸೆ ನೀಡಿದ್ದಾರೆ.

ಅಧಿಕಾರಿಗಳ ಭರವಸೆಗಳ ಮೇಲೆ 40 ವರ್ಷಗಳನ್ನು ದೂಡಿರುವ ಈ ಗ್ರಾಮಸ್ಥರ ಸಮಸ್ಯೆ ಇನ್ನಾದರೂ ಬಗೆಹರಿಯಲಿದೆಯೇ ಕಾದುನೋಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...