ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ₹5.14 ಕೋಟಿ ಹೆಚ್ಚುವರಿ ಹಣ ಬಿಡುಗಡೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

  • ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ
  • ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹೆಚ್ಚುವರಿ ಹಣ ಬಿಡುಗಡೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲ ಜಿಲ್ಲಾ ಪಮಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ ರೂಪುರೇಷೆ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಸರ್ಕಾರದ ವತಿಯಿಂದ ₹5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

“ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿರುವ ಅವರು,”ಈ ಹಿಂದೆ ಒದಗಿಸಿದ್ದ 1 ಕೋಟಿ ರೂ. ನೀಡಲಾಗಿತ್ತು. ಈಗ ಒಟ್ಟು ₹6.14 ಕೋಟಿ ಹಣ ನೀಡಿದಂತಾಗಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿ ಎರಡು ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸ್ಪಷ್ಟ ಚಿತ್ರಣ ರೂಪಿಸಿದೆ. ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಶಾಸನ ಸಭೆಯಲ್ಲೂ ಸರ್ಕಾರ ಪುನರುಚ್ಚರಿಸಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಂದುಳಿದ ಸಮುದಾಯಗಳಿಗೆ ಶಾಸನಸಭೆಯಲ್ಲೂ ಮೀಸಲಾತಿ ದೊರೆಯಬೇಕು: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

“ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ” ಎಂದು ವಿವರಿಸಿದ್ದಾರೆ.

ಒ”ಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸನ್ನದ್ಧವಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...