ಕ್ರೈಸ್ತರ ಅಭಿವೃದ್ಧಿ ಮಂಡಳಿ ರಚನೆಗೆ ₹100 ಕೋಟಿ; ಆರ್ಥೋಡಾಕ್ಸ್‌ ಚರ್ಚ್‌ ಪ್ರಶಂಸೆ

Date:

ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮತ್ತು ವಿವಿಧ ಕ್ರಿಶ್ಚಿಯನ್ ಕಲ್ಯಾಣ ಯೋಜನೆಗಳಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ನೀಡಿದೆ. ಸರ್ಕಾರದ ಕ್ರಮವನ್ನು ಮಂಗಳೂರಿನ ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್‌ನ ಬ್ರಹ್ಮಾವರ ಡಯಾಸಿಸ್ ಶ್ಲಾಘಿಸಿದೆ.

“ಸರ್ಕಾರದ ಕ್ರಮವು ಕ್ರಿಶ್ಚಿಯನ್ ಸಮುದಾಯದ ಯೋಗಕ್ಷೇಮಕ್ಕೆ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಕ್ರಿಶ್ಚಿಯನ್ನರನ್ನು ಸಬಲೀಕರಣಗೊಳಿಸುವಲ್ಲಿ ಸರ್ಕಾರದ ದೂರದೃಷ್ಟಿಯ ನಾಯಕತ್ವ ಅಭಿನಂದನೀಯ. ನಿಗದಿಪಡಿಸಿದ ಅನುದಾನವು ಶಿಕ್ಷಣ, ಆರೋಗ್ಯ ರಕ್ಷಣೆ, ಸಮಾಜ ಕಲ್ಯಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ನಿರ್ಣಾಯಕ ಕ್ಷೇತ್ರಗಳನ್ನು ಬೆಂಬಲಿಸುತ್ತದೆ. ಇದು ಅಸಂಖ್ಯಾತ ಕ್ರಿಶ್ಚಿಯನ್ ವ್ಯಕ್ತಿಗಳು ಮತ್ತು ಕುಟುಂಬಗಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ” ಎಂದು ಬ್ರಹ್ಮಾವರ ಡಯೋಸಿಸನ್ ಮೆಟ್ರೋಪಾಲಿಟನ್ ಬಿಷಪ್ ಯಾಕೋಬ್ ಮಾರ್ ಎಲಿಯಾಸ್ ಹೇಳಿದ್ದಾರೆ.

“ನಿಧಿಯ ಪರಿಣಾಮಕಾರಿ ಬಳಕೆ ಮತ್ತು ಕಲ್ಯಾಣ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿಯೊಂದಿಗೆ ಸಹಕರಿಸಲು ಎದುರು ನೋಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...