100 ದಿನ ಪೂರೈಸಿದ ಶಕ್ತಿ ಯೋಜನೆ; ಸಿಎಂ ಸಿದ್ದರಾಮಯ್ಯ ಹರ್ಷ

Date:

  • ‘ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ ಕಾರಣವಾದ ಯೋಜನೆ’
  • ‘ಬಡತಾಯಂದಿರ ಬದುಕಿನ ಬವಣೆ ಯೋಜನೆಯ ಹಿಂದಿನ ಪ್ರೇರಕ ಶಕ್ತಿ’

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ 100 ದಿನ ಪೂರೈಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ” ಎಂದು ತಿಳಿಸಿದ್ದಾರೆ.

“ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...