ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾನುವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಕಂಬಳಪದವುನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

“ದೇಶದಲ್ಲಿ ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಎಲೆಕ್ಟ್ರಿಕ್ ಬಸ್‌ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕರ್ನಾಟಕಕ್ಕೆ ಒಟ್ಟು 750 ಎಲೆಕ್ಟ್ರಿಕಲ್ ಬಸ್‌ಗಳು ಮಂಜೂರಾಗಿದ್ದು, ಆ ಪೈಕಿ ಮಂಗಳೂರಿಗೆ 100 ಬಸ್‌ಗಳನ್ನು ಮಂಜೂರುಗೊಳಿಸಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ ಸೇರಿದಂತೆ ಒಟ್ಟು 10 ಜಿಲ್ಲೆಗಳಿಗೆ ತಲಾ 100 ಎಲೆಕ್ಟ್ರಿಕಲ್ ಬಸ್‌ಗಳನ್ನು ಮಂಜೂರು ಮಾಡಲಾಗಿದೆ. ಪರಿಸರ ಸ್ನೇಹಿಯಾದ ಈ ಬಸ್‌ಗಳು ಶೀಘ್ರದಲ್ಲೇ ಮಂಗಳೂರು ನಗರದ ವಿವಿಧ ರೂಟ್‌ಗಳಲ್ಲಿ ಸಂಚರಿಸಲಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮೂಡುಬಿದಿರೆ | ಇಸ್ಪೀಟ್ ಅಡ್ಡೆ ಮೇಲೆ ಖಾಕಿ ದಾಳಿ; 8 ಮಂದಿ ವಶಕ್ಕೆ

“ಕೆಎಸ್‌ಆರ್‌ಟಿಸಿ ಕೂಡಲೇ ಈ 100 ಎಲೆಕ್ಟ್ರಿಕಲ್ ಬಸ್‌ಗಳ ನಿರ್ವಹಣೆಗೆ ಮಂಗಳೂರಿನಲ್ಲಿ ಸೂಕ್ತ ಜಾಗವನ್ನು ಗುರುತಿಸಬೇಕಿದೆ. ಇತ್ತೀಚೆಗೆ ನಡೆದಿರುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್‌ಗಳ ನಿರ್ವಹಣೆಗೆ ಜಾಗ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು | ಅನುಮತಿ ಪಡೆಯದೆ ಡಿಜೆ ಬಳಕೆ; FIR ದಾಖಲು

“ರಾಜ್ಯ ಸಾರಿಗೆ ಇಲಾಖೆಯು ಈ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕು” ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ, ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...