ನೂರು ದಿನ ಪೂರೈಸಿದ ಸರ್ಕಾರಕ್ಕೆ 100 ಮೀ. ರಸ್ತೆ ‌ಮಾಡಲು ಆಗಿಲ್ಲ: ಕೋಟ ಶ್ರೀನಿವಾಸ್‌ ಪೂಜಾರಿ ಲೇವಡಿ

Date:

  • ಬರ ಬರಲು ಕೇಂದ್ರ ಸರ್ಕಾರವೇ ಕಾರಣ ಎನ್ನುವ ಮನಸ್ಥಿತಿಯಲ್ಲಿ ಸಿಎಂ
  • ಸರ್ಕಾರದ ‌ಒಂದೇ ಒಂದು ಸಾಧನೆ ಅಂದರೆ ‌ಅದು ವರ್ಗಾವಣೆ ದಂಧೆ: ಕಿಡಿ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದರೂ ಕೇವಲ 100 ಮೀಟರ್ ರಸ್ತೆ ‌ಮಾಡಲು ಸಾಧ್ಯವಾಗಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಲೇವಡಿ ಮಾಡಿದ್ದಾರೆ.

ಕಲಬುರಗಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ತೀವ್ರ ಬರವಿದೆ. ಆದರೆ ಬರ ಬರೋದಕ್ಕೂ ಕೇಂದ್ರ ಸರ್ಕಾರವೇ ಕಾರಣ ಎನ್ನುವ ಮನಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ” ಎಂದು ಕಿಡಿಕಾರಿದ್ದಾರೆ.

“ಶಕ್ತಿ ಯೋಜನೆಗಳಿಗೆ ಖಜಾನೆಯಿಂದ ಒಂದು ರೂಪಾಯಿ ಹಣ ನೀಡಿಲ್ಲ. ಬದಲಾಗಿ ‌ಎಸ್ಸಿ ಎಸ್ಟಿ ಜನರಿಗೆ ಮೀಸಲಾಗಿದ್ದ ಅನುದಾನವನ್ನು ಶಕ್ತಿ ಯೋಜನೆಗೆ ಬಳಸಲಾಗಿದೆ. ರಾಜ್ಯದಲ್ಲಿ ಶಾಸಕರು ನೂರು ದಿನದಲ್ಲಿ ನೂರು ಮೀಟರ್‌ ರಸ್ತೆ ಮಾಡಲು ಆಗಿಲ್ಲ. ವಿಧಾನಸೌಧಕ್ಕೆ ಮಂತ್ರಿಗಳು ಬರುತ್ತಿಲ್ಲ. ಸರ್ಕಾರದ ‌ಒಂದೇ ಒಂದು ಸಾಧನೆ ಅಂದರೆ ‌ಅದು ವರ್ಗಾವಣೆ ದಂಧೆ” ಎಂದು ವಾಗ್ದಾಳಿ ನಡೆಸಿರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘ ಪರಿವಾರ ಮತ್ತು ಬಿಜೆಪಿಯವರ ಮೇಲೆ ಹುಡುಕಿ ಹುಡುಕಿ ಕೇಸ್ ಹಾಕಲಾಗುತ್ತಿದೆ. ಚೈತ್ರಾ ಕುಂದಾಪುರ ಪ್ರಕರಣ ಬಗ್ಗೆ ಬಿಜೆಪಿಯವರು ಜಾರುವುದು ಇಲ್ಲ, ಹಾರುವುದು ಇಲ್ಲ. ಮೋಸಕ್ಕೆ ಒಳಗಾಗೋರು ಜಾಗೃತರಾಗಬೇಕು. ಹಣ ಕೊಟ್ಟವರು, ತೆಗೆದುಕೊಂಡವರ ಬಗ್ಗೆ ಕ್ರಮವಾಗಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರ್ಚಕರಾಗಿ ದಲಿತರು, ಮಹಿಳೆಯರ ನೇಮಕ ಕ್ರಾಂತಿಕಾರಿ ಹೆಜ್ಜೆಯೇ? ದೇಶ ಬದಲಾಯಿತೇ?

ಪ್ರಧಾನಿ ಮೋದಿ ಅವರು ಸಮಯ ನೀಡುತ್ತಿಲ್ಲ ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಸಿಎಂ ಸಮಯ ಕೇಳಿದರೆ ಸಮಯ ಕೊಡದೆ ಇರೋ ಸಾಧ್ಯತೆ ಇಲ್ಲ. ಮೊನ್ನೆಯಷ್ಟೇ ಭೇಟಿ ಮಾಡಿ ಬಂದಿದ್ದಾರೆ. ವಿನಾಕಾರಣ ಅಪಪ್ರಚಾರ ಮಾಡೋದು ಮುಖ್ಯಮಂತ್ರಿಗಳಿಗೆ ಶೋಭೆ ತರಲ್ಲ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಮಾತ್ರ ಬರಪರಿಹಾರ ಕೆಲಸ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಕಾಗದ ಬರೆಯೋ ಸರ್ಕಾರ ಅಲ್ಲ ಅಂತ ಜನ ಅಂದುಕೊಂಡಿದ್ದರು. ಆದರೆ ಆ ಭರವಸೆಯನ್ನು ಸಿದ್ದರಾಮಯ್ಯ ಸುಳ್ಳು ಮಾಡಿದ್ದಾರೆ. ಲೋಕಸಭಾ ಚುನಾವಣೆವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದು ಕಷ್ಟ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...