ಬೀದರ್ | ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರು: ಶಾಸಕ ಪ್ರಭು ಚವ್ಹಾಣ

Date:

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರಾಗಿವೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಹೆಚ್ಚು ವಸತಿ ರಹಿತ ಜನರಿದ್ದಾರೆ. ಎಲ್ಲರಿಗೂ ಪಕ್ಕಾ ಮನೆ ಇರಬೇಕೆಂಬ ಉದ್ದೇಶದೊಂದಿಗೆ ಕ್ಷೇತ್ರಕ್ಕೆ ಹೆಚ್ಚು ಮನೆಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ. ಅದರಂತೆ ಮನೆಗಳ ಗುರಿಯನ್ನು ಹೆಚ್ಚಿಸಲಾಗಿದೆ. ಔರಾದ್ ತಾಲ್ಲೂಕಿಗೆ 6,776 ಹಾಗೂ ಕಮಲನಗರ ತಾಲ್ಲೂಕಿಗೆ 4,441 ಮನೆ ಮಂಜೂರಾಗಿವೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ₹1.75 ಲಕ್ಷ ಹಾಗೂ ಇತರೆ ಫಲಾನುಭವಿಗಳಿಗೆ ₹1.20 ಲಕ್ಷ ಸಹಾಯಧನ ನೀಡಲಾಗುತ್ತದೆ. ಒಟ್ಟು 3 ಕಂತುಗಳಲ್ಲಿ ಹಣ ಬಿಡುಗಡೆಯಾಗುತ್ತದೆ. ಮನೆ ಮಂಜೂರಾದ ನಂತರ ಜಿಪಿಎಸ್‌ ಕಳುಹಿಸಿದ ಬಳಿಕ ಕೂಡಲೇ ಮೊದಲ ಕಂತಿನ ಹಣ ಬಿಡುಗಡೆಯಾಗುತ್ತದೆ. ಮನೆ ನಿರ್ಮಾಣದ ಹಂತಗಳನ್ನು ಆಧರಿಸಿ ನಂತರದ ಕಂತುಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ಯೋಜನೆಗಾಗಿ‌‌ ದಲ್ಲಾಳಿಗಳು ಹಣದ ಬೇಡಿಕೆ ಇಡಲಾಗುತ್ತಿದೆ ಎನ್ನುವ ಮಾಹಿತಿ ಗಮನಕ್ಕೆ ಬಂದಿದೆ. ಹಾಗಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸಂಚರಿಸಿ ಗುಡಿಸಲಿನಲ್ಲಿ ವಾಸಿಸುತ್ತಿರುವ ಮತ್ತು ಒಮ್ಮೆಯೂ ಯೋಜನೆಯ ಸೌಲಭ್ಯ ಪಡೆಯದ ಬಡವರಿಗೆ ಆದ್ಯತೆ ನೀಡಬೇಕು. ಮನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ಹೇಳಿದರು.

‘ಈ ಬಗ್ಗೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಎಲ್ಲಿಯೂ ಲೋಪಗಳು ಜರುಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದು, ಎಲ್ಲಿಯಾದರೂ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಾರ್ವಜನಿಕರು ಕೂಡ ಜಾಗೃತಿ ವಹಿಸಬೇಕು. ವಸತಿ ಯೋಜನೆಗೆ ಯಾರಿಗೂ ಹಣ ಕೊಡುವ ಅವಶ್ಯಕತೆಯಿಲ್ಲ. ಎಲ್ಲಿಯಾದರೂ ಹಣಕ್ಕೆ ಬೇಡಿಕೆಯಿಡುವುದು ಕಂಡುಬಂದಲ್ಲಿ ನೇರವಾಗಿ ನನ್ನ ಗಮನಕ್ಕೆ ತರಬೇಕು. ಯೋಜನೆ ಸಮರ್ಪಕವಾಗಿ ಜಾರಿಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಶಾಸಕರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...