ದೇಶದ ಬ್ಯಾಂಕ್‌ಗಳಿಗೆ ನವೆಂಬರ್ ತಿಂಗಳಲ್ಲಿ 15 ದಿನ ರಜೆ; ಯಾಕೆ? ಇಲ್ಲಿದೆ ಮಾಹಿತಿ

Date:

ಭಾರತೀಯ ರಿಸರ್ವ ಬ್ಯಾಂಕ್‌ ನವೆಂಬರ್‌ ತಿಂಗಳ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ತಿಂಗಳು ಬ್ಯಾಂಕ್‌ಗಳಿಗೆ ಬರೋಬ್ಬರಿ 15 ದಿನ ರಜೆ ಇರಲಿದೆ.

ಭಾರತೀಯ ರಿಸರ್ವ ಬ್ಯಾಂಕ್(RBI) ಪ್ರತಿ ತಿಂಗಳು ರಜಾ ದಿನಗಳ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಆರ್‌ಬಿಐ ರಜಾ ಪಟ್ಟಿಯಲ್ಲಿರೋ ರಜೆಗಳು ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಬ್ಯಾಂಕುಗಳು, ಕೋ ಆಪರೇಟಿವ್ ಬ್ಯಾಂಕುಗಳು ಹಾಗೂ ಪ್ರಾದೇಶಿಕ ಬ್ಯಾಂಕುಗಳಿಗೆ ಅನ್ವಯಿಸಲಿವೆ. ಈ ರಜೆಗಳು ನವೆಂಬರ್ ತಿಂಗಳ ಎಲ್ಲ ರವಿವಾರಗಳು, ಎರಡನೆ ಮತ್ತು ನಾಲ್ಕನೇಯ ಶನಿವಾರಗಳ ರಜೆಯನ್ನೂ ಒಳಗೊಂಡಿವೆ.

ಬ್ಯಾಂಕ್ ರಜೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿದ ಆರ್‌ಬಿಐ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾ ದಿನ
  • ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜೆಗಳು
  • ಅಕೌಂಟ್ಸ್​ ಕ್ಲೋಸಿಂಗ್ ರಜೆಗಳು

ಶನಿವಾರ, ಭಾನುವಾರ ಸೇರಿ ಒಟ್ಟು 15 ರಜೆಗಳು ನವೆಂಬರ್ ತಿಂಗಳಲ್ಲಿ ಇವೆ. ಬ್ಯಾಂಕ್ ರಜಾ ದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ದೀಪಾವಳಿ ಹಬ್ಬವಲ್ಲದೇ, ಕನ್ನಡ ರಾಜ್ಯೋತ್ಸವ, ಕನಕದಾಸ ಜಯಂತಿ ಇತ್ಯಾದಿ ರಜೆಗಳಿವೆ. ಕರ್ವಾ ಚೌತ್, ವಂಗಲ ಹಬ್ಬ, ಗೋವರ್ಧನ ಪೂಜೆ ಇತ್ಯಾದಿ ನಾನಾ ಪ್ರದೇಶಗಳಿಗೆ ಸೀಮಿತವಾದ ಹಬ್ಬಗಳಿಗೆ ಆಯಾ ಪ್ರದೇಶಗಳಲ್ಲಿ ರಜೆ ಇದೆ.

ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಒಟ್ಟು 9 ರಜೆಗಳಿವೆ. ಬ್ಯಾಂಕ್‌ಗಳು ಈ ದಿನಗಳಲ್ಲಿ ಬಂದ್ ಆಗಿದ್ದರೂ ಕೂಡ ನಿಮ್ಮ ಸಾಮಾನ್ಯ ಹಣಕಾಸು ಚಟುವಟಿಕೆಗಳಿಗೆ ಹೆಚ್ಚಿನ ಅಡ್ಡಿ-ಆತಂಕ ಇರುವುದಿಲ್ಲ. ಎಟಿಎಂಗಳು, ಡಿಜಿಟಲ್ ಬ್ಯಾಂಕಿಂಗ್ ಇರುತ್ತದೆ.

ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಹಾಗೂ ಗೆಝೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ.

ಈ ಸುದ್ದಿ ಓದಿದ್ದೀರಾ? ಚಾಮರಾಜಪೇಟೆ ಈದ್ಗಾ ಮೈದಾನ: ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್

2023 ನವೆಂಬರ್‌ನಲ್ಲಿ ನಾನಾ ಕಡೆ ಇರುವ ಬ್ಯಾಂಕ್ ರಜಾ ದಿನಗಳು

  • ನವೆಂಬರ್ 1 ಬುಧವಾರ: ಕನ್ನಡ ರಾಜ್ಯೋತ್ಸವ, ಕತ್ ಮತ್ತು ಕರ್ವಾ ಚೌತ್ (ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ರಜೆ)
  • ನವೆಂಬರ್ 5: ಭಾನುವಾರದ ರಜೆ
  • ನವೆಂಬರ್ 10 ಶುಕ್ರವಾರ: ವಂಗಲ ಹಬ್ಬ (ಮೇಘಾಲಯ ರಾಜ್ಯದಲ್ಲಿ ಬ್ಯಾಂಕ್‌ಗಳಿಗೆ ರಜೆ)
  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 13, ಸೋಮವಾರ: ಗೋವರ್ಧನ ಪೂಜೆ, ದೀಪಾವಳಿ ಹಬ್ಬ (ತ್ರಿಪುರಾ, ಸಿಕ್ಕಿಂ, ಉತ್ತರಾಖಂಡ್, ಮಣಿಪುರ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಬ್ಯಾಂಕ್‌ಗಳಿಗೆ ರಜೆ).
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ (ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕ್‌ಗಳಿಗೆ ರಜೆ)
  • ನವೆಂಬರ್ 15, ಬುಧವಾರ: ದೀಪಾವಳಿ, ಚಿತ್ರಗುಪ್ತ ಜಯಂತಿ, ನಿಂಗೋಲ್ ಚಕ್ಕೋಬಾ, ಭ್ರತೃದ್ವಿತೀಯಾ ಆಚರಣೆ (ಸಿಕ್ಕಿಂ, ಮಣಿಪುರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 20, ಸೋಮವಾರ: ಆರ್ಘ್ಯ (ಬಿಹಾರ ಮತ್ತು ರಾಜಸ್ಥಾನದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 23, ಮಂಗಳವಾರ: ಸೆಂಗ್ ಕುತ್ಸ್​ನೆಮ್, ಇಗಾಸ್ ಬಾಗವಾಲ್ ಹಬ್ಬ (ಉತ್ತರಾಖಂಡ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ).
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 27, ಸೋಮವಾರ: ಗುರು ನಾನಕ್ ಜಯಂತಿ, ಕಾರ್ತಿಕ ಪೂರ್ಣಮಾ ಮತ್ತು ರಾಹಸ್ ಪೂರ್ಣಿಮಾ ಹಬ್ಬ ಪ್ರಯುಕ್ತ ಮಧ್ಯಪ್ರದೇಶ, ಒಡಿಶಾ, ತ್ರಿಪುರಾ, ಮಿಝೋರಾಂ, ಮಹಾರಾಷ್ಟ್ರ, ಚಂಡೀಗಢ, ಉತ್ತರಾಖಂಡ್, ತೆಲಂಗಾಣ, ರಾಜಸ್ಥಾನ, ಜಮ್ಮು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬ್ಯಾಂಕ್‌ಗಳಿಗೆ ರಜೆ.
  • ನವೆಂಬರ್ 30, ಗುರುವಾರ: ಕನಕದಾಸ ಜಯಂತಿ (ಕರ್ನಾಟಕದಲ್ಲಿ ರಜೆ)

ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಇರುವ ರಜೆಗಳು

  • ನವೆಂಬರ್ 1: ಕನ್ನಡ ರಾಜ್ಯೋತ್ಸವ
  • ನವೆಂಬರ್ 5: ಭಾನುವಾರ
  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 30 ಗುರುವಾರ: ಕನಕದಾಸ ಜಯಂತಿ

ಈ ತಿಂಗಳಲ್ಲಿ ಬ್ಯಾಂಕ್‌ಗಳು ಹಲವು ದಿನಗಳವರೆಗೆ ಮುಚ್ಚಿರುತ್ತವೆ. ಆದ್ದರಿಂದ, ನೀವು ಬ್ಯಾಂಕ್‌ನಲ್ಲಿ ಏನಾದರೂ ನಿಮಗೆ ಕೆಲಸಗಳಿದ್ದರೆ, ರಜಾ ದಿನಗಳ ಪಟ್ಟಿಯನ್ನು ನೋಡಿದ ನಂತರವೇ ಬ್ಯಾಂಕ್‌ಗೆ ಹೊರಡಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...