ಬೀದರ್‌ | ಪಿಎಂಎವೈ-ಜಿ : ಜಿಲ್ಲೆಗೆ 15 ಸಾವಿರ ಮನೆ ಮಂಜೂರು : ಸಂಸದ ಸಾಗರ ಖಂಡ್ರೆ

Date:

ಬೀದರ್‌ ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ -ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 15 ಸಾವಿರ ಮನೆಗಳು ಮಂಜೂರಾಗಿವೆ ಎಂದು ಬೀದರ ಸಂಸದ ಸಾಗರ ಈಶ್ವರ ಖಂಡ್ರೆ ತಿಳಿಸಿದರು.

ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ 2024-25ನೇ ಸಾಲಿನಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಫಲಾನುಭವಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಮಂಜೂರಾದ ಪಿಎಂಎವೈ-ಜಿ ಮನೆಗಳ ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು.

ಪಿಎಂಎವೈ-ಜಿ ಅಡಿಯಲ್ಲಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 1.20 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1.75 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಮನೆ ಮಂಜೂರಾತಿ ಸೇರಿದಂತೆ ಯಾವುದಕ್ಕೂ ಮಧ್ಯವರ್ತಿಗಳ ನಂಬಬೇಡಿ, ಮನೆಯ ಆರ್ಥಿಕ ನೆರವು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದೆ. ಮೊದಲ ಕಂತು ಜಮೆಯಾದ ಬಳಿಕ ಮನೆ ಕಾಮಗಾರಿ ಆರಂಭಿಸತಕ್ಕದ್ದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಲ್ಕಿ ತಾಲ್ಲೂಕಿನ ಗ್ರಾಮಾಂತರ ವ್ಯಾಪ್ತಿಗೆ ಒಟ್ಟು 3 ಸಾವಿರ ಮನೆ ಮಂಜೂರಾಗಿದ್ದು, ಈ ಪೈಕಿ ಮೊದಲ ಹಂತದ 665 ಫಲಾನುಭವಿಗಳಿಗೆ ಇಂದು ತಿಳುವಳಿಕೆ ಪತ್ರ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಇನ್ನೂ ವಸತಿ ರಹಿತರ ಗುರುತಿಸುವಿಕೆ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗುವುದುʼ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸ್ ಟಿಕೆಟ್‌ ದರ ಹೆಚ್ಚಳ ಖಂಡಿಸಿ ಎಬಿವಿಪಿ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಭಾಲ್ಕಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಣಮಂತ ಚೌವ್ಹಾಣ, ಮಾಜಿ ಪುರಸಭೆ ಅಧ್ಯಕ್ಷ ಬಸವರಾಜ್ ವಂಕೆ, ಕಾಂಗ್ರೆಸ್ ಮುಖಂಡ ವಿಲಾಸರಾವ್ ಮೋರೆ, ಅಂಬಾದಾಸ್ ಕೋರೆ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...