ಕಲಬುರಗಿ | ಮೊರಾರ್ಜಿ ಶಾಲೆಯಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ

Date:

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಊಟದ ಸಮಸ್ಯೆ ಇದೆ ಎಂಬ ಆರೋಪಗಳಿವೆ. ವಿದ್ಯಾರ್ಥಿಗಳಿಗೆ ಸರಿಯಾದ ಉಪಹಾರ ನೀಡಿಲ್ಲ, ಕುಡಿಯಲು ಕಲುಷಿತ ನೀರು ಕೊಡಲಾಗಿದ್ದು, ಆ ಕಾರಣಕ್ಕೆ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಪಾಲಕರು ಹಾಗೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಅಡುಗೆ ಸಹಾಯಕರು ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸ್ವಚ್ಛತೆ ಮಾಡುವುದಿಲ್ಲ. ಬಾಲ್ ಹುಳು, ನುಸಿ ಸೇರಿದಂತೆ ಇನ್ನಿತರ ಕ್ರಿಮಿಗಳು ಆಹಾರದಲ್ಲಿರುತ್ತವೆ. ಅಡುಗೆ ತಯಾರಿಸುವ ಕೋಣೆಯ ಸುತ್ತಲೂ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಕಲುಷಿತ ನೀರು ಹಾಗೂ ಕಳಪೆ ಗುಣಮಟ್ಟದ ಆಹಾರದಿಂದ 17 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ” ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಂತಿ, ಭೇದಿ, ಹೊಟ್ಟೆ ನೋವು, ಎದೆ ಉರಿ ಹಾಗೂ ಕೆಲವು ವಿದ್ಯಾರ್ಥಿಗಳಿಗೆ ದೇಹದ ಅಲರ್ಜಿಯಾಗಿದೆ. ಅಡುಗೆ ಸಹಾಯಕರು ಮಾತ್ರ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪ್ರಾಚಾರ್ಯರು ಹಾಗೂ ವಸತಿ ನಿಲಯದ ವಾರ್ಡನ್ ಸಮಸ್ಯೆಗಳನ್ನು ಆಲಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ಬರುವುದಿಲ್ಲ” ಎಂದು ಪೋಷಕರು ದೂರಿದ್ದಾರೆ.

ಆಸ್ಪತ್ರೆಗೆ ಹಾಗೂ ವಸತಿ ನಿಲಯಕ್ಕೆ ತಹಶೀಲ್ದಾರ್‌, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಪಿಎಸ್‌ಐ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಅಡುಗೆ ಸಹಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ನಡೆಸುತ್ತವೆಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

ವರದಿ : ಸಿಟಿಜನ್ ಜರ್ನಲಿಸ್ಟ್ ಮಿಲಿಂದ್ ಸಾಗರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...