ಬಾಗೇಪಲ್ಲಿ | ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನ; ಪೋಸ್ಟರ್ ಬಿಡುಗಡೆ

Date:

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೃಷ್ಣಾ ನದಿ ನೀರು, ಕೈಗಾರಿಕೆ, ಶಿಕ್ಷಣ, ಉದ್ಯೋಗ ಇತ್ಯಾದಿ ಹಕ್ಕೊತ್ತಾಯಗಳ ಧ್ಯೇಯದೊಂದಿಗೆ ಬಾಗೇಪಲ್ಲಿಯಲ್ಲಿ ನ.21, 22ರಂದು ಆಯೋಜಿಸಿರುವ ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನದ ಕರಪತ್ರಗಳನ್ನು ಸಿಪಿಐಎಂ ಪದಾಧಿಕಾರಿಗಳು ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಭಾನುವಾರ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿ ವೆಂಕಟಪ್ಪ, ಸಿಪಿಐಎಂ ಕಳೆದ 70 ವರ್ಷಗಳಿಂದ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ನಿರಂತರ ಚಳುವಳಿ, ಹೋರಾಟಗಳನ್ನು ನಡೆಸುತ್ತಾ ದುಡಿಯುವ ವರ್ಗಗಳ ಪಕ್ಷವಾಗಿದೆ. ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ರೈತರ ಬೆಳೆಗಳು ಕಮರಿಹೋಗಿವೆ. ರೈತರು ದಿವಾಳಿಯಾಗುವ ಸ್ಥಿತಿ ನಿರ್ಮಾಣವಾಗಿದ್ದು, ಈ ಭಾಗದ ಜನರ ಕೃಷಿ ಮತ್ತು ಬದುಕಿಗೆ ಕೃಷ್ಣಾ ನದಿ ನೀರು ಹರಿಸಿ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ಜನಾಂದೋಲನ ನಡೆಸುವ ಮೂಲಕ ಸರ್ಕಾರದ ಕಣ್ಣು ತೆರೆಸಬೇಕಿದೆ ಎಂದು ಕರೆ ನೀಡಿದರು.

ಮತ್ತೊಂದೆಡೆ ತಾಲ್ಲೂಕಿನಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಕೂಲಿಕಾರರು ಮತ್ತು ಯುವಜನರು ಹಳ್ಳಿಗಳಲ್ಲಿ ಜೀವನೋಪಾಯದ ಅವಕಾಶಗಳಿಲ್ಲದೆ ಪಟ್ಟಣಗಳಿಗೆ ವಲಸೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಉದ್ಯೋಗಾಧಾರಿತ ಕೈಗಾರಿಕೆಗಳ ಸ್ಥಾಪನೆ ಅತ್ಯಗತ್ಯವಾಗಿದೆ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನ ಅತ್ಯಂತ ಮಹತ್ವದ್ದಾಗಿದ್ದು, ಸಮ್ಮೇಳನದಲ್ಲಿ ರೈತರು, ಪ್ರಗತಿಪರ ಚಿಂತಕರು, ಬುದ್ಧಿ ಜೀವಿಗಳು, ಕೃಷಿ ಕೂಲಿ ಕಾರ್ಮಿಕರು, ವಿಧ್ಯಾರ್ಥಿಗಳು, ವಿವಿಧ ಪ್ರಗತಿಪರ ಸಂಘಟನೆಗಳು, ಹಿರಿಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಶಿಕ್ಷಣ, ಉದ್ಯೋಗ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ರಾಷ್ಟ್ರವನ್ನು ತಲ್ಲಣಗೊಳ್ಳಿಸಿರುವ ಭಯೋತ್ಪಾದನೆ, ಕೋಮವಾದ, ಭ್ರಷ್ಟಾಚಾರ, ಯುವಕರ ನಿರುದ್ಯೋಗ, ಬಡತನ ಸೇರಿದಂತೆ ಇನ್ನೂ ಹಲವಾರು ಪ್ರಮುಖ ವಿಷಯಗಳ ಕುರಿತು ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು ಈ ಸಮ್ಮೇಳನದಲ್ಲಿ ಜರುಗಲಿವೆ ಎಂದು ಮಾಹಿತಿ ನೀಡಿದರು.

ಸಿಪಿಐಎಂ ಕರಪತ್ರ 1

ಸಮ್ಮೇಳನದಲ್ಲಿ ಕಾಂ. ಬಿ.ವಿ. ರಾಘವುಲು, ಸಿಪಿಐ(ಎಂ) ಪೊಲಿಟಿಕಲ್ ಬ್ಯೂರೋ ಸದಸ್ಯರು, ಡಾ. ಅನಿಲ್ ಕುಮಾರ್,
ಕಾಂ.ಯು.ಬಸವರಾಜು, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಗಳು, ಕಾಂ ಕೆ.ಎನ್.ಉಮೇಶ್, ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಕಾಂ.ಜಿ.ಸಿ.ಬಯ್ಯಾರೆಡ್ಡಿ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು, ಕಾಂ. ಎಂ.ಪಿ. ಮುನಿವೆಂಕಟಪ್ಪ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕಾಂ. ಜಯರಾಮರೆಡ್ಡಿ, ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯರು ಕಾಂ.ಎಂ.ಎನ್.ರಘುರಾಮರೆಡ್ಡಿ, ಸಿಪಿಐ(ಎಂ) ಬಾಗೇಪಲ್ಲಿ ತಾಲ್ಲೂಕು ಕಾರ್ಯದರ್ಶಿ ಕಾಂ.ಸಿದ್ದಗಂಗಪ್ಪ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರು ಕಾಂ.ಕೆ.ನಾಗರಾಜು, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರು ಕಾಂ.ಸಾವಿತ್ರಮ್ಮ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರು ಸೇರಿದಂತೆ ಇತರೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಿಪಿಐಎಂ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ, ಗ್ರಾಮೀಣ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ಬಡರೈತರ ಕುಟುಂಬಗಳು ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿ ನರಳುತ್ತಿದ್ದಾರೆ. ಮತ್ತೊಂದೆಡೆ ಮೈಕ್ರೋಫೈನಾನ್ಸ್‌ ನಂತರ ಸಂಸ್ಥೆಗಳಿಂದ ನಿರಂತರ ಅಭದ್ರತೆ, ಮಾನಸಿಕ ಒತ್ತಡ ಹೆಚ್ಚಿಸಿ ಆತ್ಮಹತ್ಯೆಗೆ ದೂಡುವ ಪರಿಸ್ಥಿತಿಗಳು ನಿರ್ಮಾಣವಾಗುತ್ತಿವೆ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಚಳುವಳಿಯೊಂದೇ ಜನತೆಯ ಮುಂದಿರುವ ಆಯ್ಕೆಯಾಗಿದೆ. ಜ್ವಲಂತ ಸಮಸ್ಯೆಗಳ ಮೇಲೆ ಮುಂದೆ ಚಳುವಳಿ ರೂಪಿಸಲು ಚಿಕ್ಕಬಳ್ಳಾಪುರ ಜಿಲ್ಲೆಯ 18ನೇ ಜಿಲ್ಲಾ ಸಮ್ಮೇಳನ ನವೆಂಬರ್ 21-22, 2024 ಬಾಗೇಪಲ್ಲಿಯಲ್ಲಿ ನಡೆಯುತ್ತಿದ್ದು, 21 ರಂದು ನಡೆಯುವ ಬಹಿರಂಗ ಸಭೆಗೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ರಾಗಿ, ಜೋಳ ಖರೀದಿ ಕೇಂದ್ರ; ನೋಂದಣಿಗೆ ಡಿ.ಸಿ ಮನವಿ

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ವಾಲ್ಮೀಕಿ ಅಶ್ವತ್ಥಪ್ಪ, ಒಬಳ ರಾಜು, ಕೃಷ್ಣಪ್ಪ, ಮುನಿಯಪ್ಪ, ರಫೀಕ್, ಲಕ್ಷ್ಮೀ ನಾರಾಯಣ, ಎಸ್.ಎಫ್ ಐ ಮುಖಂಡ ಸೋಮಶೇಖರ್ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...