ರಾಯಚೂರು | ಬಾಡೂಟ ಸೇವಿಸಿ 20 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.

ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ 10 ಜನರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಕುರಿತು ಗ್ರಾಮಸ್ಥ ಮಲ್ಲೇಶ್ ಮಾತನಾಡಿ, ʼಬುಧವಾರ ರಾತ್ರಿ ದೇವರ ಕಾರ್ಯ ಅಂಗವಾಗಿ ಮಾಡಿದ್ದ ಮೌಂಸಹಾರ ಸೇವಿಸಿದರು. ಸುಮಾರು 60 ಜನರು ಊಟ ಸೇವಿಸಿದ್ದಾರೆ. ಆದರೆ, ಅವರಲ್ಲಿ 15-20 ಜನರಿಗೆ ವಾಂತಿ ಭೇದಿ ಶುರುವಾಗಿದೆ. ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಗುಣಮುಖರಾಗಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲುಷಿತ ಆಹಾರ ಸೇವನೆಯೇ ತಾಲ್ಲೂಕಿನ ತಾಂಡಾ ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, ‘ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...