ಬೀದರ್‌ | 20 ಕಳ್ಳತನ ಪ್ರಕರಣ: 44 ಲಕ್ಷ ಮೌಲ್ಯದ ಸ್ವತ್ತು ಜಪ್ತಿ : ಎಸ್ಪಿ. ಚನ್ನಬಸವಣ್ಣ.ಎಸ್.ಎಲ್

Date:

ಬೀದರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ 20 ಕಳ್ಳತನ ಪ್ರಕರಣಗಳನ್ನು ಭೇದಿಸಿ 14 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಗಳಿಂದ 44.07 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಬೀದರ ಗಾಂಧಿ ಗಂಜ ಠಾಣಾ ವ್ಯಾಪ್ತಿಯ ಹಕ್ ಕಾಲೋನಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 7.25 ಲಕ್ಷ ರೂ. ಬೆಲೆಯ 155 ಗ್ರಾಂ. ಬಂಗಾರದ ಬಿಸ್ಕಟ್‌ಗಳು, 3 ಸಾವಿರ ನಗದು ಹಣ ಹಾಗೂ ಕಳುವು ಮಾಡಿದ ಬಂಗಾರ ಮಾರಾಟ ಮಾಡಿ ಖರೀದಿಸಿದ 2.50 ಲಕ್ಷ ರೂ. ಮೌಲ್ಯದ ಸ್ಕಾರ್ಪಿಯೋ ಕಾರು ವಶಕ್ಕೆ ಪಡೆಯಲಾಗಿದೆ. ಆರೋಪಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು ಅವನಿಗೆ ರಿಮ್ಯಾಂಡ್ ಹೋಮ್ ಗೆ ಒಪ್ಪಿಸಲಾಗಿದೆ” ಎಂದು ಹೇಳಿದರು.
ಹುಮನಾಬಾದ ಹಾಗೂ ಹಳ್ಳಿಖೇಡ (ಬಿ) ಠಾಣಾ ವ್ಯಪ್ತಿಯಲ್ಲಿ ನಡೆದ 8 ಕಳ್ಳತನ ಪ್ರಕಣದಲ್ಲಿ ಭಾಗಿಯಾಗಿರುವ ಓರ್ವ ಆರೋಪಿಯನ್ನು ಬಂಧಿಸಿ ಆರೋಪಿತನಿಂದ 20.10 ಲಕ್ಷ ರೂ.ಗಳ 31 ತೊಲೆ 9 ಗ್ರಾಂ ಬಂಗಾರದ ಆಭರಣಗಳು ಮತ್ತು 150 ತೊಲೆ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯಲಾಗಿದೆ. ಈ ಆರೋಪಿಯು ತೆಲಂಗಾಣ ರಾಜ್ಯದಲ್ಲಿ ವಿವಿಧ 53 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಬೆಮಳಖೇಡಾ ಠಾಣಾ ವ್ಯಾಪ್ತಿಯಲ್ಲಿ ನಡೆದ 6 ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 3.62 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.
“ಅದೇ ರೀತಿ ಬೀದರ ನೂತನ ನಗರ ಪೊಲೀಸ್ ಠಾಣೆ, ಮನ್ನಳಿ ಪೊಲೀಸ್ ಠಾಣೆ, ಜನವಾಡ ಪೊಲೀಸ್ ಠಾಣೆ, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಎಂಟು ಜನ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ 10.56 ಲಕ್ಷ ರೂ. ಬೆಲೆಯ ವಿದ್ಯುತ್ ಕಂಡಕ್ಟರ್‌ಗಳು, ಕಿರಾಣಿ ಅಂಗಡಿ ಸಾಮಾನುಗಳು ಮತ್ತು ಎತ್ತು ಮತ್ತು ಬಂಡಿ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನ ಸೇರಿದಂತೆ ಇತರೆ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬೀದರ ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ್, ಗಾಂಧಿ ಗಂಜ ಠಾಣೆಯ ಪೊಲೀಸ್ ನಿರೀಕ್ಷಕ ಹನುಮರಡ್ಡೆಪ್ಪ, ಬೀದರ ಗ್ರಾಮೀಣ ವೃತ್ತದ ಪೊಲೀಸ್ ನಿರೀಕ್ಷಕ ಶ್ರೀನಿವಾಸ ಅಲ್ಲಾಪೂರೆ, ನೂತನ ನಗರ ಠಾಣೆಯ ಪೊಲೀಸ್ ನಿರೀಕ್ಷಕ ವಿಜಯಕುಮಾರ, ಚಿಟಗುಪ್ಪಾ ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‌ಐ ತಸ್ಲೀಂ ಸುಲ್ತಾನಾ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...