ಬೆಂಗಳೂರು ಗ್ರಾಮಾಂತರ | 300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಕೆ ಜೆ ಜಾರ್ಜ್ ಭೂಮಿ ಪೂಜೆ

Date:

ಮುಂದಿನ 30 ವರ್ಷದವರೆಗೂ ನೆಲಮಂಗಲ ಕ್ಷೇತ್ರಕ್ಕೆ ವಿದ್ಯುತ್ ಪೂರೈಕೆ ಕೊರತೆ ಇಲ್ಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 220 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ನಾವು 220 ಕೆವಿ ವಿದ್ಯುತ್ ಸ್ಥಾವರ ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್ – ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿ ಪಂಪ್ ಸೆಟ್‌ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್‌ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇ.50ಕ್ಕೆ ಹೆಚ್ಚಿಸಿದೆ. ಆದರೆ, ಕೇಂದ್ರ ಸರ್ಕಾರವು ಶೇ.30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ಶೇ.20ರಷ್ಟು ವೆಚ್ಚ ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.

ನೆಲಮಂಗಲ ಶಾಸಕ ಶ್ರೀನಿವಾಸ ಮಾತನಾಡಿ, ನೆಲಮಂಗಲ ತಾಲೂಕಿನಲ್ಲಿ 300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು. ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದೆ. ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು, ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್‌ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | 2024ರಲ್ಲಿ 190 ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್, ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...