ಕೋಲಾರ | ಜಿಲ್ಲಾ ಪತ್ರಕರ್ತರ ಕಲ್ಯಾಣನಿಧಿಗೆ ಸಿಎಂ ಸಿದ್ದರಾಮಯ್ಯ 25 ಲಕ್ಷ ರೂ. ಬಿಡುಗಡೆ

Date:

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್‌ ಹೇಳಿದರು.

ಕೋಲಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ. ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದರು. ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಂಘದ ಮನವಿ ಮೇರೆಗೆ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ ಅನುದಾನ ದೊರಕಿಸುವ ಭರವಸೆ ನೀಡಿದ್ದರು. ನೀಡಿದ ವಾಗ್ದಾನದಂತೆ ಕೆ.ವಿ.ಪ್ರಭಾಕರ್ ಅವರು ಮಾಡಿದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣನಿಧಿಗೆ 25 ಲಕ್ಷರೂ ಮಂಜೂರು ಮಾಡಿದ್ದರು. ಇದೀಗ ಅನುದಾನದ ಹಣ 25 ಲಕ್ಷರೂ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದುವರೆಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸ್ವಂತ ಸಂಪನ್ಮೂಲ ಹಾಗೂ ಪತ್ರಕರ್ತರಾದ ಕೋಲಾರದ ಪಾ.ಶ್ರೀ.ಅನಂತರಾಮ್, ಮಾಲೂರಿನ ಎಸ್.ವಿ.ಲೋಕೇಶ್, ಬಂಗಾರಪೇಟೆಯ ಎಸ್.ಪಿ.ವೆಂಕಟೇಶ್, ಉದ್ಯಮಿ ಅಬ್ದುಲ್ ಸುಬಾನ್ ಮತ್ತು ಕೋಲಾರ ಪತ್ರಕರ್ತರ ಕ್ರೀಡಾತಂಡದ ದೇಣಿಗೆಯನ್ನು ಒಟ್ಟುಗೂಡಿಸಿ ಇದುವರೆಗೂ 5 ಲಕ್ಷರೂ, ನಿಧಿ ಸಂಗ್ರಹಿಸಿದೆ. ಅದರೊಂದಿಗೆ ಇದೀಗ ಮುಖ್ಯಮಂತ್ರಿಗಳಿಂದ ಬಿಡುಗಡೆಯಾಗಿರುವ ಅನುದಾನವು ಸೇರಿ ಕಲ್ಯಾಣನಿಧಿಯ ಒಟ್ಟು ಮೊತ್ತ 30 ಲಕ್ಷರೂ. ಗಳಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೋಲಾರದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಉದಾರವಾಗಿ 25 ಲಕ್ಷರೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಿ.ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಎಲ್ಲಾ ಪತ್ರಕರ್ತರ ಪರವಾಗಿ ಧನ್ಯವಾದಗಳು ಎಂದು ಹೇಳಿದರು.

ಇದೇ ವೇಳೆ ಇದುವರೆಗೂ ಸಂಗ್ರಹವಾಗಿರುವ ಕಲ್ಯಾಣನಿಧಿಯ 30ಲಕ್ಷ ರೂಗಳನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಇರಿಸಿ ಅದರಿಂದ ಬರುವ ಬಡ್ಡಿಯಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ನೆರವು ನೀಡುವುದಾಗಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಸಭೆಯಲ್ಲಿ ಸಂಘದ ಪದಾಧಿಕಾರಿಗಳಾದ ಎಸ್.ಕೆ.ಚಂದ್ರಶೇಖರ್, ಎ.ಜಿ.ಸುರೇಶ್ ಕುಮಾರ್, ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಕೆ.ಎಸ್.ಗಣೇಶ್, ವಿ.ಮುನಿರಾಜು ಮತ್ತು ಪಾ.ಶ್ರೀ.ಅನಂತರಾಮ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...