ರಾಯಚೂರು | ಒಂದೇ ದಿನ 25 ಜನರ ಮೇಲೆ ಬೀದಿ ನಾಯಿಗಳ ದಾಳಿ — ಆಸ್ಪತ್ರೆಗೆ ದಾಖಲು

Date:

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದೇ ದಿನದಲ್ಲಿ 25ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೈ,ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿದ ಘಟನೆ ನಡೆದಿದೆ.

ನಗರದ ವಾರ್ಡ್ ನಂಬರ್ 14 ಖೂನಿ ಮಸೀದಿ, ತಿಮ್ಮಾಪೂರಪೇಟೆ, ಬೇರೂನ್ ಕಿಲ್ಲಾ ಸೇರಿ ಕೆಲವೆಡೆ ಗುರುವಾರ ಒಂದೇ ದಿನ 25ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು ಅವರೆಲ್ಲರೂ ಸ್ಥಳೀಯ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಸಂಜೆ 15ಕ್ಕೂ ಹೆಚ್ಚು ಗಾಯಗೊಂಡಿರುವವರು ರಿಮ್ಸ್ ಆಸ್ಪತ್ರೆಗೆ ಏಕಕಾಲಕ್ಕೆ ಬಂದಿದ್ದು ತುರ್ತು ಚಿಕಿತ್ಸಾ ಕೊಠಡಿಯಲ್ಲಿ ವೈದ್ಯರನ್ನು ಚಿಂತೆಗೀಡು ಮಾಡಿದೆ.

ಬೀದಿ ನಾಯಿಗಳ ಹಿಂಡು ಬೆಳಿಗಿನ ಜಾವ ವಾಯು ವಿಹಾರಕ್ಕೆ ಹೋಗುವಾಗ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಒಬ್ಬಂಟಿಯಾಗಿ ಒಡಾಡಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೀದಿ ನಾಯಿಗಳ ದಾಳಿಗೆ ಗುರಿಯಾಗಿದವರು ಮಕ್ಕಳು, ಮಹಿಳೆಯರು ಇದ್ದಾರೆ ಮನೆಯ ಮುಂದೆ ಆಟ ಆಡುವಾಗ ಹೊರಗೆ ತಿರುಗಾಡುವಾಗ ಸಿಕ್ಕ ಸಿಕ್ಕವರ‌ ಮೇಲೆ ದಾಳಿ ಮಾಡುತ್ತಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ‌ ಹಿಂದೆಯೂ ಬೀದಿ ನಾಯಿಗಳ ಅಟ್ಟಹಾಸಕ್ಕೆ 15ಕ್ಕೂ ಹೆಚ್ಚು ಜನ ಒಂದೇ ದಿನ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು ಮಹಾನಗರ ಪಾಲಿಕೆಯಿಂದ ಹೊರ ರಾಜ್ಯದ ತಂಡದಿಂದ ಬೀದಿ ನಾಯಿಗಳ ಕಾರ್ಯಚರಣೆ ಮಾಡಿ ಸೆರೆ ಹಿಡಿಯಲಾಗಿತ್ತು.‌ ಕೆಲ ದಿನಗಳಿಂದ ನೆಮ್ಮದಿಯಿಂದ ಇದ್ದ ಜನರು ಈಗ ಪುನಃ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಪಾಲಿಕೆಗೆ ತಲೆನೋವಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಳೆಯ ಡಿಡಿಪಿಐ ಕಚೇರಿಯಲ್ಲಿ ಬೆಂಕಿ ಅವಘಡ; ಹಳೆಯ ದಾಖಲೆ ಭಸ್ಮ

ರಿಮ್ಸ್ ಆಸ್ಪತ್ರೆಗೆ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ಭೇಟಿ ನೀಡಿ ಸಂತ್ರಸ್ಥರಿಗೆ ಸಾಂತ್ವಾನ ನೀಡಿದರು. ಬೀದಿ ನಾಯಿಗಳ ದಾಳಿಯಿಂದ ಒಳಗಾದ ಸಂತ್ರಸ್ಥರಿಗೆ ಸರ್ಕಾರವೆ ಉತ್ತಮ ಚಿಕಿತ್ಸೆ ನೀಡಿ ಪರಿಹಾರ ನೀಡಬೇಕು. ಅನೇಕ ತಿಂಗಳಿನಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಜಿಲ್ಲಾಡಳಿತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮೊಹಮ್ಮದ್ ಶಫಿ, ಮುಷ್ತಾಕ್ ಅಹಮದ್ ಮತ್ತಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...