ಗದಗ | ಬಾಲಕಿಗೆ ಮೆಸೇಜ್ ಕಳಿಸಿದ ಆರೋಪ: 3 ದಲಿತ ಯುವಕರ ಮೇಲೆ 60 ಸವರ್ಣೀಯರಿಂದ ಅಮಾನುಷ ಹಲ್ಲೆ

Date:

ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ ಯವಕರ ಪೋಷಕರಿಗೂ ಸವರ್ಣೀಯರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯು ನರಗುಂದ ತಾಲೂಕಿನ ಬನಹಟ್ಟಿಯಲ್ಲಿ ಮೇ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಬಲ ಜಾತಿಯ ಬಾಲಕಿಗೆ ಮೆಸೇಜ್ ಕಳಿಸಿದ್ದಾರೆ, ಚುಡಾಯಿಸಿದ್ದಾರೆ ಎಂಬ ಆರೋಪದ ಯುವಕರನ್ನು ಸವರ್ಣೀಯರು ಥಳಿಸಿದ್ದಾರೆ ಎಂದು ಹೇಳಲಾಗಿದೆ.

ದಲಿತ ಯುವಕರನ್ನು ಸಾರ್ವಜನಿಕವಾಗಿ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ ಹಗ್ಗ, ದೊಣ್ಣೆ, ಚಪ್ಪಲಿಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಯುವಕರ ರಕ್ಷಣೆಗೆ ಬಂದ ಪೋಷಕರಿಗೂ ಬೆದರಿಕೆ ಹಾಕಿ ವಾಪಸ್‌ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ಯುವಕರ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಊರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ನಮ್ಮ ಮಕ್ಕಳನ್ನು ಅನಾವಶ್ಯಕವಾಗಿ, ಸುಳ್ಳು ಆರೋಪದ ಮೇಲೆ ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನರಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದಾಗ್ಯೂ, ಸವರ್ಣೀಯರು ರಾಜಿ-ಸಂದಾನಕ್ಕೆ ಮುಂದಾಗಿದ್ದು, ಮಾತುಕತೆ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಆದರೆ, ಹಲ್ಲೆಗೊಳಗಾದವರಲ್ಲಿ ಓರ್ವ ಯುವಕ ಅನುಮಾನದಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

“ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಈವರೆಗೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಬಾಲಕಿಯರನ್ನು ಯುವಕರು ಚುಡಾಯಿಸಿದ್ದಾರೆ ಎಂಬ ಆರೋಪಗಳೂ ಇವೆ. ಆ ಬಗ್ಗೆಯೂ ತನಿಖೆ ನಡೆಯುತ್ತಿದೆ” ಎಂದು ನರಗುಂದ ಪೊಲೀಸರು ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಪ್ರಬಲ ಜಾತಿಯವರೂ ಕೂಡ ಸಂತ್ರಸ್ತ ಯುವಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...