ಯಶ್ ಅಭಿಮಾನಿಗಳ ದುರಂತ ಸಾವು | ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

Date:

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ  ಘೋಷಿಸಿದೆ.

ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. ಅಲ್ಲದೇ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ, “ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು, ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ ಅಭಿಮಾನಿಗಳ ಮನೆಗೆ ಇಂದು (ಜ.8) ಸಂಜೆ 4 ಗಂಟೆಗೆ ನಟ ಯಶ್​ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲಾಧಿಕಾರಿ ವೈಶಾಲಿ ಭೇಟಿ

ಘಟನೆಗೆ ಸಂಬಂಧಿಸಿ ಗ್ರಾಮಕ್ಕೆ ಭೇಟಿ ನೀಡಿದ ಗದಗ ಜಿಲ್ಲಾಧಿಕಾರಿ ವೈಶಾಲಿಯವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಘಟನೆ ನಡೆಯಬಾರದಿತ್ತು. ನಿಜವಾಗಲೂ ದುರಂತದ ಘಟನೆ. ಘಟನೆಯ ಸಂಬಂಧ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಕೂಡಲೇ ಸ್ಪಂದಿಸಿದ್ದಾರೆ. ಶೀಘ್ರವೇ ಪರಿಹಾರದ ಮೊತ್ತವನ್ನು ಭರಿಸುವ ಬಗ್ಗೆ ಮಾತುಕತೆ ನಡೆಸುತ್ತೇವೆ” ಎಂದು ತಿಳಿಸಿದರು.

ಏನಿದು ಘಟನೆ?

ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನ(ಜ.8) ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ 20 ಅಡಿ ಎತ್ತರದ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿದ್ದೀರಾ? ಗದಗ | ನಟ ಯಶ್ ಜನ್ಮದಿನದ ಬ್ಯಾನರ್​ ಹಾಕುವಾಗ ವಿದ್ಯುತ್​ ಸ್ಪರ್ಶ ; ಮೂವರು ಸಾವು

ಹನಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಟೌಟ್‌ನಲ್ಲಿ ಕಬ್ಬಿಣದ ಫ್ರೇಮ್ ಇದ್ದಿದ್ದರಿಂದ ಅದನ್ನು ಎಲ್ಲರೂ ಒಟ್ಟಿಗೆ ಸೇರಿ ಮೇಲೆತ್ತುವಾಗ ವಿದ್ಯುತ್ ತಂತಿ ತಗುಲಿ ಈ ದುರಂತ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...