ಮುಖ್ಯಮಂತ್ರಿ ಗೃಹಕಚೇರಿಯಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ: ಕುಮಾರಸ್ವಾಮಿ ಗಂಭೀರ ಆರೋಪ

Date:

ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಶಾಸಕರ ಶಿಫಾರಸು ತಂದ್ರೆ ಸಾಲದು, ಜೊತೆಗೆ 30 ಲಕ್ಷ ದುಡ್ಡು ತನ್ನಿ ಅಂತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದರು.

ವಿಧಾನಸೌಧದಲ್ಲಿ ಜಂಟಿಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಡುವೆ ಸುದ್ದಿಗೋಷ್ಠಿ ಕರೆದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದರು.

“ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷಗಳ ಬಗ್ಗೆ ಚರ್ಚಿಸುತ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್‌ ಕೊಟ್ಟ ಭರವಸೆ ಈಡೇರಿಸಲು ಆಗಿಲ್ಲ. ಈ ಸರ್ಕಾರ ಐಸಿಯುಗೆ ಹೋಗುವ ಕಾಲ ಬರುತ್ತೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಲಿದೆ. ಮುಂದಿನ ಐದು ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣದ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಲಿಲ್ಲ” ಎಂದರು.

“ರಾಜ್ಯಪಾಲರಿಂದ ಈ ಸರ್ಕಾರ ಭಾಷಣ ಮಾಡಿಸಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯದ ಹಲವಾರು ಸಮಸ್ಯೆಗಳ ಬಗ್ಗೆ ರಾಜ್ಯಪಾಲರ ಮೂಲಕ ಸದನಕ್ಕೆ, ರಾಜ್ಯದ ಜನತೆಗೆ ಸಂದೇಶ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದ ಪಕ್ಷ ಎಂದು ಹೇಳಿಕೊಂಡಿದ್ದಾರೆ. ಆದರೆ ಈ ಸರ್ಕಾರ ಹಾಲು ಉತ್ಪಾದಕರಿಗೆ ಹಣ ಕಡಿತ ಮಾಡಿದೆ. ಸಿಎಂ ಹೇಳಿದ್ದರೂ ಸಹ ಪ್ರೋತ್ಸಾಹ ಧನ ಕಡಿತಗೊಳಿಸಲಾಗಿದೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...