ಬೆಳಗಾವಿ | ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ

Date:

ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಗೆ ತುತ್ತಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಮನೆ-ಮನೆಗಳಿಗೆ ಬೋರ್​ವೆಲ್‌ನಿಂದ ನಲ್ಲಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ನೀರು ಸರಬರಾಜು ಪೈಪ್‌ ಒಡೆದಿದ್ದು, ಕುಡಿಯುವ ನೀರಿನೊಂದಿಗೆ ಕೊಳಚೆ ನೀರು ಕೂಡ ಸೇರಿಕೊಳ್ಳುತ್ತಿದೆ. ಅದೇ ನೀರನ್ನು ಕುಡಿದು 30ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ.

ವಾಂತಿ, ಭೇದಿಗೆ ತುತ್ತಾಗಿರುವ 30 ಮಂದಿಯಲ್ಲಿ 10 ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ನಿಪ್ಪಾಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವರು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಗಳಿದ್ದು, ವೈದ್ಯರ ತಂಡ ಕಸನಾಳ ಗ್ರಾಮಕ್ಕೆ ತೆರಳಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲುಷಿತ ನೀರಿನಿಂದಾಗ ನೂರಾರು ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚುತ್ತಲೇ ಇವೆ. ಕಳೆದ ಒಂದೇ ತಿಂಗಳಲ್ಲಿ ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ. ಅಕ್ಟೋಬರ್ 4ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಮತ್ತು 7ನೇ ವಾರ್ಡ್‌ನಲ್ಲಿ ಕಲುಷಿತ ನೀರು ಕುಡಿದು ಸುಮಾರು 150 ಮಂದಿ ಅಸ್ವಸ್ಥರಾಗಿದ್ದರು.

ಇನ್ನು, ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದರು.ಅಲ್ಲದೆ, ಹಲವರು ಅಸ್ವಸ್ಥರಾಗಿದ್ದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...