ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿರಿಸಿದ ಪತಿ!

Date:

ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿದ್ದ ಭಯಾನಕ‌ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ಸೂಟ್​​ಕೇಸ್​ನಲ್ಲಿ ತುಂಬಿಟ್ಟಿರುವ ಬಗ್ಗೆ ವರದಿಯಾಗಿದೆ.

1003939613

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿ ರಾಕೇಶ್‌ನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ನಿಯನ್ನು ಕೊಂದ ಬಳಿಕ ‘ಗೌರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ’ ಎಂದು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ರಾಕೇಶ್​ ಕೃತ್ಯವನ್ನು ತಿಳಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಹುಳಿಮಾವು ಪೊಲೀಸರಿಗೆ ದೂರು ರವಾನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರು ಮನೆಗೆ ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ ಪರಿಶೀಲನೆ ನಡೆಸಿದ್ದಾರೆ.

1003939704

”ಮಹಾರಾಷ್ಟ್ರ ಪೊಲೀಸರು ನಮ್ಮ ಕಂಟ್ರೋಲ್​​ ರೂಂಗೆ ನೀಡಿದ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯ ಬಾತ್ ರೂಮ್‌ನಲ್ಲಿ‌ ಸೂಟ್ ಕೇಸ್‌ನಲ್ಲಿ‌ ಮಹಿಳೆ ಗೌರಿಯ ಮೃತದೇಹ ಪತ್ತೆಯಾಗಿದೆ. ಪರಾರಿಯಾಗಿದ್ದ ಆರೋಪಿ‌ ರಾಕೇಶ್​ನನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡದ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ” ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

2 ವರ್ಷಗಳ ಹಿಂದೆ ಮದುವೆಯಾಗಿದ್ದ ರಾಕೇಶ್ ಹಾಗೂ ಗೌರಿ ಒಂದು ತಿಂಗಳ‌ ಹಿಂದಷ್ಟೆ ದೊಡ್ಡಕಮ್ಮನಹಳ್ಳಿಯಲ್ಲಿ ಮನೆ ಪಡೆದು ವಾಸವಿದ್ದರು. ಇಬ್ಬರೂ ಸಹ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ವರ್ಕ್ ಫ್ರಂ ಹೋಮ್ ಇದ್ದ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...