ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

Date:

ವಾಹನವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಒಂದೇ ಕುಟುಂಬದ ಮೂವರು ಮತ್ತು ಇತರೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಗೆರಗಿರೆಡ್ಡಿ ಪಾಳ್ಯದ ನಿವಾಸಿಗಳಾದ ದೇವಮ್ಮ(38), ತಂದೆ ಮಾರಪ್ಪ(63), ಮಗ ಅಂಜಿ(18), ಆದಿನಾರಾಯಣ(26) ಮತ್ತು ಹಾಲಿ ಚಿಂತಾಮಣಿ ನಗರದಲ್ಲಿ ವಾಸವಿರುವ ಆಂಧ್ರ ಮೂಲದ ವೆಂಕಟರಮಣ(24) ಬಂಧಿತ ಐವರು ಆರೋಪಿಗಳು.

ಒರಿಸ್ಸಾದಿಂದ ಬರುವ ಗಾಂಜಾವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ರೈಲಿನಲ್ಲಿ ತಿರುಪತಿಗೆ ತಂದಿದ್ದ ದೇವಮ್ಮ ಮತ್ತು ಗ್ಯಾಂಗ್ ಮುಳುಬಾಗಿಲು, ಶ್ರೀನಿವಾಸಪುರ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪ್ರವೇಶ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ನಗರ ಸೆನ್‌ ಠಾಣೆ ಪೊಲೀಸರು ಸುಮಾರು 17.5ಲಕ್ಷ ಮೌಲ್ಯದ 35.6ಕೆಜಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಗಾಂಜಾ ಸಾಗಾಣೆಗೆ ಬಳಸಿದ್ದ ಮಹಿಂದ್ರ ಕಾರು, ಮೊಬೈಲ್‌ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ಸೊಕ್ಕು-ಸರ್ವಾಧಿಕಾರ-ಮೆದು ಹಿಂದುತ್ವದ ದಾರಿಯನ್ನು ತೊರೆಯುವರೇ ಕೇಜ್ರೀವಾಲ್?

ನಗರ ಸೆನ್‌ ಠಾಣೆಯ ಡಿವೈಎಸ್ಪಿ ರವಿಕುಮಾರ್‌, ಇನ್ಸ್ಪೆಕ್ಟರ್‌ ಸೂರ್ಯಪ್ರಕಾಶ್‌ ಸೇರಿದಂತೆ ಸಿಬ್ಬಂದಿವರ್ಗದವರು ದಾಳಿಯಲ್ಲಿ ಭಾಗವಹಿಸಿದ್ದು, ಎಸ್ಪಿ ಕುಶಾಲ್‌ ಚೌಕ್ಸೆ ತಂಡವನ್ನು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...