ಮಳೆ ಹಾನಿಯಿಂದ ಮನೆ ಬಿದ್ದರೆ ಹಕ್ಕು ಪತ್ರ ನೋಡದೆ 5 ಲಕ್ಷ ರೂ. ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

Date:

  • ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಇಲ್ಲವೋ ವಿಚಾರ ಬೇಡ
  • ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಕುಸಿತ, ಸಿಎಂ ಗರಂ

ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಅಥವಾ ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಪರಿಹಾರ ನೀಡಿ. ಮೊದಲು ಮನೆ ಆಗಬೇಕು ಅಷ್ಟೇ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮಂಗಳವಾರ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಿ. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು” ಎಂದು ಸೂಚಿಸಿದರು.

“ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲು ಸಂಕದ ಅನಾಹುತಗಳನ್ನು ತಪ್ಪಿಸಲು ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕೆಲಸ ಮಾಡಿ” ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ಯೋಚನೆ ಸರ್ಕಾರದ ಮುಂದಿಲ್ಲ: ಗೃಹ ಸಚಿವ ಪರಮೇಶ್ವರ್‌

ಆರೋಗ್ಯ ಸೂಚ್ಯಂಕದಲ್ಲಿ ಕುಸಿತ, ಸಿಎಂ ಗರಂ

2015ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18ನೇ ಸ್ಥಾನದಲ್ಲಿದ್ದು, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುಕ್ಕೆ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮ ಹೊಣೆಗಾರಿಕೆ ಇಲ್ಲವಾ ಎಂದು ಡಿಎಚ್ಒ ಅವರನ್ನು ಪ್ರಶ್ನಿಸಿದರು.

“ಉಡುಪಿ ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಸಸ್ಪೆಂಡ್ ಆಗಬೇಕಾಗುತ್ತದೆ ಎಂದು ಎಚ್ಚರಿಸಿದ ಬಳಿಕ ಪಕ್ಕದಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಬಗ್ಗೆ ನಿಗಾ ವಹಿಸಿ ಸುಧಾರಣೆ ಕಾಣದಿದ್ದರೆ ಡಿಎಚ್ಒ ಅವರನ್ನು ಮುಲಾಜಿಲ್ಲದೆ ಸಸ್ಪೆಂಡ್ ಮಾಡಿ” ಎಂದು ಸೂಚಿಸಿದರು.

ಶಿಕ್ಷಣದಲ್ಲೂ ಕುಸಿತ

ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, “ಈ ಕುಸಿತ ನಿಮಗೆ ನಾಚಿಕೆ, ಬೇಸರ ತರುವುದಿಲ್ಲವೇ? ಮುಂದಿನ ಅವಧಿ ವೇಳೆಗೆ ನಿಮ್ಮ ಮತ್ತು ಜಿಲ್ಲೆಯ ಕಾರ್ಯಕ್ಷಮತೆ ಕಾಣದಿದ್ದರೆ ನಿಮ್ಮನ್ನು ಶಾಶ್ವತವಾಗಿ ಮನೆಗೆ ಕಳಹಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...