ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

“ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ಕೆಲವರು ವೃಥಾ ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ. ಸರ್ಕಾರ ಬಸವಕಲ್ಯಾಣದ ಅಭಿವೃದ್ಧಿಗೆ ಮತ್ತು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಬದ್ಧವಾಗಿದೆ” ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಮಾರ್ಚ್ ತಿಂಗಳವರೆಗಿನ ಬಿಲ್ ಪಾವತಿ ಮಾಡಲು ಕೂಡಲೇ 50 ಕೋಟಿ ರೂ. ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕೂಡಲೇ ಅವರು ಹಣ ಮಂಜೂರು ಮಾಡಿದರು. ಆ ಹಣ ಜಿಲ್ಲಾಧಿಕಾರಿ ಖಾತೆಗೂ ಜಮಾ ಆಗಿದೆ. ಆದರೂ ಕೆಲವರು ಸುಳ್ಳು ಪ್ರಚಾರ ಮಾಡಿ ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನ್ಯಾಯಾಲಯಗಳಲ್ಲಿ ಪೂಜೆ-ಪುನಸ್ಕಾರ ನಿಲ್ಲಿಸಿ; ಸಂವಿಧಾನಕ್ಕೆ ತಲೆಬಾಗಿ: ನ್ಯಾಯಮೂರ್ತಿ ಅಭಯ್ ಓಕಾ

“ಮುಂದಿನ ದಿನಗಳಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಪಟಕ್ಕೆ ಹೆಚ್ಚಿನ ಅನುದಾನ ತಂದು, ಕಾಮಗಾರಿಗೆ ವೇಗ ನೀಡಿ, ಬಸವ ಭಕ್ತರ ಮತ್ತು ಕಲ್ಯಾಣ ಕರ್ನಾಟಕದ ಜನರ, ಜಗತ್ತಿನಲ್ಲಿ ಇರುವ ಶರಣರ ಕನಸು ನನಸು ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...