ಬೀದರ್ ಲೋಕಸಭಾ ಕ್ಷೇತ್ರಕ್ಕೆ 50,380 ಮನೆ ಮಂಜೂರು : ಸಂಸದ ಸಾಗರ್‌ ಖಂಡ್ರೆ

Date:

2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಗ್ರಾಮೀಣ) ಬೀದರ್ ಲೋಕಸಭಾ ಕ್ಷೇತ್ರಕ್ಕೆ 50,380 ಪರಿಷ್ಕೃತ ಮನೆಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಆದ್ಯತ್ಯಾ ಪಟ್ಟಿಯಲ್ಲಿರುವ ಫಲಾನುಭವಿಗಳು ಫೆ.15ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.

ʼಕ್ಷೇತ್ರದ 50,380 ಪರಿಷ್ಕೃತ ಮನೆಗಳ ವರ್ಗವಾರು ಮತ್ತು ಜಾತಿವಾರು ಆದ್ಯತಾ ಪಟ್ಟಿ ಈಗಾಗಲೇ ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿದ್ದು, ಇದನ್ನು ಖಾತ್ರಿಪಡಿಸಿಕೊಂಡು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ ಸಂಖ್ಯೆ, ಪಡಿತರ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತಿ ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿದೆʼ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಪಿಡಿಓ ಮತ್ತು ಡಿಇಓ ಅವರು ಅರ್ಹ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಆಧಾರ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಮೊಬೈಲ್ ಸಂಖ್ಯೆಗಳನ್ನು ಪಡೆದು ನೋಂದಾಯಿಸಿಕೊಂಡು, ಜಿಯೋಟ್ಯಾಗ್ ಮಾಡಿದ ಫೋಟೊಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಅಪಲೋಡ್ ಮಾಡಿ ಫೆ.15ರೊಳಗೆ ಜಿಲ್ಲಾ ಪಂಚಾಯಿತಿಯಿಂದ ಅನಮೋದನೆ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿಡಿಪಿಐ, ಬಿಇಒ ನಿರ್ಲಕ್ಷ್ಯದಿಂದ ಔರಾದ್‌ ತಾಲ್ಲೂಕಿನ ಶಿಕ್ಷಣದ ಗುಣಮಟ್ಟ ಕುಸಿತ : ಶಾಸಕ ಪ್ರಭು ಚವ್ಹಾಣ

ಸಾಮಾನ್ಯ, ಅಲ್ಪಸಂಖ್ಯಾತರ ವರ್ಗದ ಫಲಾನುಭವಿಗಳಿಗೆ ₹1.20 ಲಕ್ಷ ಹಾಗೂ ಎಸ್ಸಿ,ಎಸ್ಟಿ ವರ್ಗದವರಿಗೆ ₹1.75 ಲಕ್ಷ ಅನುದಾನ ಮಂಜೂರಾಗುತ್ತದೆ. ನನ್ನ ಲೋಕಸಭಾ ಕ್ಷೇತ್ರವನ್ನು ಹಂತ-ಹಂತವಾಗಿ ಗುಡಿಸಲು ಮುಕ್ತ ಮಾಡುವ ಗುರಿ ಹೊಂದಿದ್ದೇನೆ. ಈ ಸಂಬಂಧ ಫಲಾನುಭವಿಗಳಿಂದ ಏನೇ ದೂರು, ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...