ಮಂಡ್ಯ | ಸರ್ಕಾರಿ ಶಾಲೆಗಳಲ್ಲಿ ಗಿಡ ಬೆಳೆಸಿದರೆ 6 ಸಾವಿರ ಸ್ಕಾಲರ್‌ಶಿಪ್

Date:

ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ಬೆಳೆಸಿ, ಉತ್ತಮವಾಗಿ ಆರೈಕೆ ಮಾಡುವವರಿಗೆ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮಂಡ್ಯದ ಚಿತ್ರಕೂಟ ಸಂಸ್ಥೆ ಘೋಷಿಸಿದೆ.

ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿವರ್ಷ ಓಜೋನ್ ದಿನದಂದು “Green Scholarship” ವಿತರಿಸಲಾಗುತ್ತದೆ. ಬ್ರಿಟಿಷ್ ಐಲ್ಯಾಂಡ್ಸ್‌ನಲ್ಲಿ ಗಣಿತ ಶಿಕ್ಷಕರಾಗಿರುವ ಕೆ.ಆರ್.ಪೇಟೆ ಮೂಲದ ಸಂತೇಬಾಚಳ್ಳಿ ಪ್ರಭುಗೌಡ ಈ ಯೋಜನೆಗೆ ತಮ್ಮ ಸ್ವಂತ ಹಣದಲ್ಲಿ ನಿಧಿ ಸ್ಥಾಪಿಸಿದ್ದಾರೆ. ಚಿತ್ರಕೂಟ ಸಂಸ್ಥೆಯ ಮೇಲ್ವಿಚಾರಣೆಯಲ್ಲಿ ಪ್ರಾಯೋಗಿಕವಾಗಿ ಚಿಕ್ಕಮಂಡ್ಯ ಪ್ರೌಢಶಾಲೆಯಲ್ಲಿ ಈ ವಿದ್ಯಾರ್ಥಿವೇತನಕ್ಕೆ ಚಾಲನೆ ನೀಡಲಾಗಿದೆ.

ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪರಿಸರ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳು ಚಿತ್ರಕೂಟದ ಈ ನೂತನ ಹಸಿರು ವಿದ್ಯಾರ್ಥಿ ವೇತನಕ್ಕೆ ಬೆಂಬಲವಾಗಿ ನಿಂತಿದೆ. ಕಳೆದ ವಾರ ಎರಡು ದಿನಗಳ ಕಾಲ ಶ್ರಮದಾನ ಮಾಡಿ, ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಹೊಸ ಬಣ್ಣ ಬಳಿದು, ಕಲಿಕೆಗೆ ಪೂರಕವಾದ ಚಿತ್ರಗಳನ್ನು ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಮಂಡ್ಯ | ಎತ್ತಂಗಡಿ ಭೀತಿಯಲ್ಲಿ ತಮಿಳು ಕಾಲೋನಿ ನಿವಾಸಿಗಳು: ‘ಜಾಗ ಬಿಟ್ಟು ಕದಲಲ್ಲ’ ಎಂದ ಜನ

ಸರ್ಕಾರಿ ಶಾಲೆಗಳಲ್ಲಿ ಹಸಿರು ವಿಸ್ತರಿಸಲು ಇಚ್ಛಿಸುವ ಆಸಕ್ತ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಗಳು ಚಿತ್ರಕೂಟ ಸಂಸ್ಥೆಯ ಮೊಬೈಲ್ ನಂಬರ್‌ಗಳಿಗೆ 9448473715, 7760396467 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನಮಗೆ ತೇಜಸ್ವಿ ಅವರೇ ಪ್ರೇರಣೆ. ಮಕ್ಕಳಲ್ಲಿ ಪರಿಸರ ಪ್ರೇಮವನ್ನು ಬೆಳೆಸುವುದರ ಜತೆಗೆ ಶಾಲೆಯ ಆವರಣವನ್ನು ತಂಪಾಗಿ ಇಡುವ ಸದುದ್ದೇಶದಿಂದ ಚಿತ್ರಕೂಟ “KP Poornachandra Tejaswi Scholarship for Green Initiatives” ಆರಂಭಿಸಿದೆ. ತೇಜಸ್ವಿಯನ್ನು ಓದಿಕೊಂಡು ಬೆಳೆದವರು ನಾವು. ಹಾಗಾಗಿ ಅವರ ಹೆಸರಿನಲ್ಲಿ ಸ್ನೇಹಿತರ ನೆರವಿನಿಂದ ಸ್ಕಾಲರ್‌ಶಿಪ್ ಆರಂಭಿಸಿದ್ದೇವೆ ಎನ್ನುತ್ತಾರೆ ಚಿತ್ರಕೂಟದ ಮುಖ್ಯಸ್ಥ ಧನುಷ್ ಗೌಡ ಎಚ್.ಎಸ್.

IMG 20241125 WA0013
ಧನುಷ್‌ ಗೌಡ ಎಚ್‌ ಎಸ್

ಸ್ಕಾಲರ್‌ಷಿಪ್ ಮಕ್ಕಳಲ್ಲಿ ಆಸಕ್ತಿ ಹೆಚ್ಚಿಸಿದೆ. ಕಳೆದ ವಾರ ಚಿತ್ರಕೂಟ ಆಯೋಜಿಸಿದ್ದ ಶಂಕರ ನಿರಂತರ ಶ್ರಮದಾನದಲ್ಲಿ ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು‌ ಚಿಕ್ಕಮಂಡ್ಯ ಪ್ರೌಢಶಾಲೆಯ ಆವರಣದಲ್ಲಿ 50 ಸಸಿಗಳನ್ನು ನೆಟ್ಟಿದ್ದರು. ಈಗ ಅವುಗಳ ಪಾಲನೆಗೆ ಸ್ಕಾಲರ್‌ಷಿಪ್ ಒತ್ತಾಸೆಯಾಗಿದೆ. ನಮ್ಮ ತೋಟಗಾರಿಕೆ ಮತ್ತು ದೈಹಿಕ ಶಿಕ್ಷಕರು ಶ್ರಮ ಹಾಕಿದ್ದಾರೆ. ಇಬ್ಬರಿಗೂ ಧನ್ಯವಾದಗಳು ಎಂದು ಚಿಕ್ಕಮಂಡ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಚ್.ಎನ್.ದೇವರಾಜು ತಿಳಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಮಂಡ್ಯ ಪ್ರೌಢಶಾಲೆ ದೈಹಿಕ ಶಿಕ್ಷಕರಾದ ಚಂದನ್, “ನನ್ನ ಮರ, ನನ್ನ ಸಂಗಾತಿ ಘೋಷದೊಂದಿಗೆ ಗಿಡಗಳಿಗೆ ನಿತ್ಯ ಹಾರೈಕೆ ಮಾಡುವ ಸಲುವಾಗಿ ಒಂದೊಂದು ಸಸಿಯನ್ನು ಒಬ್ಬೊಬ್ಬ ವಿದ್ಯಾರ್ಥಿಗೆ ದತ್ತು ಕೊಟ್ಟಿದ್ದೇವೆ. ಪ್ರತಿ ಗಿಡಕ್ಕೆ “ಇದು ನನ್ನ ಮರ, ನನ್ನ ಸಂಗಾತಿ” ಅಂತ ಪುಟ್ಟ ಟ್ಯಾಗ್ ಕೊಟ್ಟು ವಿದ್ಯಾರ್ಥಿಗಳ ಹೆಸರು ಬರೆದು, ಚಿಣ್ಣರ ಕೈಯಿಂದಲೇ ಸಸಿಗಳಿಗೆ ಕಟ್ಟಿಸಿ ಸಸಿಗಳನ್ನು ಪೋಷಿಸುವ ಜವಾಬ್ದಾರಿ ಹಂಚಿಕೆ ಮಾಡಿದ್ದೇವೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಗಿಡಗಳನ್ನು ಪೋಷಿಸುತ್ತಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

IMG 20241113 WA0005
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...