ಕುಂಭಮೇಳ ಪ್ರವಾಸ ಪ್ಯಾಕೇಜ್‌ ಹೆಸರಿನಲ್ಲಿ ₹70 ಲಕ್ಷ ವಂಚನೆ; ಆರೋಪಿಯ ಬಂಧನ

Date:

ಇತ್ತೀಚೆಗೆ ನಡೆದ ಮಹಾ ಕುಂಭಮೇಳಕ್ಕೆ ಪ್ರವಾಸ ಕರೆದುಕೊಂಡು ಹೋಗುವ ಪ್ಯಾಕೇಜ್‌ ಹೆಸರಿನಲ್ಲಿ ಸಾರ್ವಜನಿಕರಿಗೆ ಬರೋಬ್ಬರಿ ₹70 ವಂಚಿಸಿದ್ದ ಆರೋಪಿಯನ್ನು ಕಡೆಗೂ ಬೆಂಗಳೂರಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್‌ ಬಂಧಿತ ಆರೋಪಿ.

ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ಒಂದರ ಪ್ರತಿನಿಧಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸಾಪ್‌ ಗ್ರೂಪ್‌ಗಳಲ್ಲಿ ನಕಲಿ ಜಾಹಿರಾತು ನೀಡಿ ಜನರನ್ನು ಮರಳು ಮಾಡುತ್ತಿದ್ದ ರಾಘವೇಂದ್ರನಿಂದ ನೂರಾರು ಜನ ಅಮಾಯಕರು ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.

ಕುಂಭಮೇಳದ 7 ದಿನಗಳ ಪ್ರವಾಸಕ್ಕೆಂದು ಒಬ್ಬೊಬ್ಬರಿಂದ ₹49 ಸಾವಿರ ಸಂಗ್ರಹಿಸುತ್ತಿದ್ದ. ಇದೇ ರೀತಿ ನೂರಕ್ಕೂ ಹೆಚ್ಚು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿಯು ಕೆಲವರಿಗೆ ಟಿಕೆಟ್‌ ಬುಕ್‌ ಮಾಡಿ ನಂತರ ರದ್ದು ಮಾಡುತ್ತಿದ್ದ. ಇನ್ನೂ ಕೆಲವರಿಗೆ ಪ್ರಯಾಗ್‌ರಾಜ್‌ಗೆ ತೆರಳಿದ ಬಳಿಕ ವಾಪಸ್‌ ಟಿಕೆಟ್‌ ಬುಕ್‌ ಮಾಡದೇ ಫೋನ್‌ ಆಫ್‌ ಮಾಡಿಕೊಳ್ಳುತ್ತಿದ್ದ. ಈ ರೀತಿ ವಂಚನೆಗೊಳಗಾದ 20 ಮಂದಿ ಆತನ ವಿರುದ್ಧ ದೂರು ನೀಡಿದ್ದು, ₹70 ಲಕ್ಷ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಇನ್ನು ಸಾರ್ವಜನಿಕರಿಗೆ ವಂಚಿಸಿ ಸಂಗ್ರಹಿಸಿದ್ದ ಹಣವನ್ನು ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದು, ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...