ಝಾನ್ಸಿ ರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ 77ನೇ ಗಣರಾಜ್ಯೋತ್ಸವ ಆಚರಣೆ.

Date:

ಚಿಂತಾಮಣಿ : ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಬೆಲೆ ಸಿಗುವುದಿಲ್ಲ ಸಂವಿಧಾನ ಹೇಗೇ ಇರಲಿ ಅದನ್ನು ಅನುಷ್ಠಾನಗೊಳಿಸುವವರ ಉದ್ದೇಶ ಸರಿಯಾಗಿದ್ದರೆ ಸಂವಿಧಾನ ಸದಾ ಸಮಾಜಕ್ಕೆ ಅನುಕೂಲಕರವಾಗಿರುತ್ತದೆ ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು ಎಂದು ತಹಶೀಲ್ದಾರ್ ಸುದರ್ಶನ ಯಾದವ್ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನ ಆಳವಾದ ಅಗಾಧವಾದ ಹಾಗೂ ಸುಲಲಿತವಾದುದು. ಬಿ ಆರ್ ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು ಹಲವಾರು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ನಮ್ಮ ದೇಶದ ಸಮಸ್ಯೆಗಳಿಗೆ ಅನುಗುಣವಾದ ಸಂವಿಧಾನವನ್ನು ರಚನೆ ಮಾಡಿದರು. ಇಡೀ ವಿಶ್ವದಲ್ಲೆ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನದ ಆಶಯಗಳನ್ನು ದೇಶದ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ವಿಶೇಷವಾಗಿ ಯುವ ಜನಾಂಗ ದೇಶದ ಸ್ವಾತಂತ್ರ್ಯದ ಇತಿಹಾಸವನ್ನು ವ್ಯಾಸಂಗ ಮಾಡಬೇಕು ಸಂವಿಧಾನದ ಉದ್ದೇಶಗಳನ್ನು ಅರ್ಥ ಮಾಡಿಕೊಳ್ಳಬೇಕು.ದೇಶದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿಗಾಗಿ ಶ್ರಮಿಸಬೇಕು ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಸರ್ವ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಮನವಿ ಮಾಡಿದರು.

ನಗರಸಭೆ ಪೌರಾಯುಕ್ತ ಜಿ ಎನ್ ಚಲಪತಿ ಮಾತನಾಡಿ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ನಗರದಲ್ಲಿ ಹಾಗೂ ಕ್ಷೇತ್ರದಲ್ಲಿ ನೂರಾರು ಕೋಟಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು ವಿವಿಧ ಹಂತಗಳಲ್ಲಿವೆ. ಎಲ್ಲವೂ ಅನುಷ್ಠಾನದ ನಂತರ ಬ್ರಾಂಡ್ ಚಿಂತಾಮಣಿ ಆಗಲಿದೆ. ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪೊಲೀಸ್ಎನ್.ಸಿಸಿಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತಂಡಗಳು ಪಥಸಂಚಲನ ಹಾಗೂ ಧ್ವಜವಂಧನೆ ನೀಡಿದರು.

ಇದನ್ನು ಓದಿದ್ದೀರಾ..? ಗಣಿಗಾರಿಕೆ ಚಾಲಕ ಸಾವು ದೂರಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

ಈ ವೇಳೆ ಡಿವೈಎಸ್ಪಿ ಪಿ ಮುರಳೀಧರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಅಶೋಕ ಕುಮಾರ್,ಬೋವಿ ಸಂಘದ ಜಿಲ್ಲಾಧ್ಯಕ್ಷರಾದ ಎಂ ಗುರ್ರಪ್ಪ,ವಿವಿಧ ಇಲಾಖೆಗಳ ಅಧಿಕಾರಿಗಳು ,ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿವರ್ಗ,ನಗರದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...