ಚಿಕ್ಕಬಳ್ಳಾಪುರ | ಹರ್‌ ಘರ್‌ ತಿರಂಗಾ ಅಭಿಯಾನ; 800 ಮೀ. ತ್ರಿವರ್ಣ ಧ್ವಜ ಪ್ರದರ್ಶನ

Date:

ನಗರದಲ್ಲಿ ಬುಧವಾರ ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್  ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 800 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಭಾರತೀಯರೆಲ್ಲರು ಒಂದೇ ಎಂಬ  ಮನೋಭಾವನೆಯಿಂದ ದೇಶದ ಸುಸ್ಥಿರ ಅಭಿವೃದ್ಧಿಯತ್ತ ಸಾಗುವಲ್ಲಿ ಸಲ್ಲಿಸುವ ಸೇವೆಯು ಅಮೂಲ್ಯವಾದದ್ದು. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ. ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬುವುದು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಯಾವುದೇ ಭೇದ ಭಾವವಿಲ್ಲದೆ ಭಾವೈಕ್ಯತೆಯಿಂದ ಶ್ರಮಿಸಲು ಈ  ಜಾಗೃತಿ ಜಾಥಾ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ತ್ರಿರಂಗ ಜಾಥಾ 1

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಈ ರೀತಿಯ ಜಾಥಾ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಾಭಿಮಾನವನ್ನು ಪ್ರೇರೇಪಿಸುತ್ತದೆ. ಅದರಲ್ಲೂ ವಿದ್ಯಾರ್ಥಿ ಯುವಜನರಲ್ಲಿ ದೇಶಪ್ರೇಮ ಮತ್ತು ದೇಶಭಕ್ತಿಯನ್ನು ಜಾಗೃತಗೊಳಿಸುತ್ತದೆ. ರಾಷ್ಟ್ರದಲ್ಲಿ ಜೀವಿಸುವವರೆಲ್ಲರೂ ರಾಷ್ಟ್ರಕ್ಕೆ ಗೌರವ, ಘನತೆಯನ್ನು ತಂದು ಕೊಡುವ ನಿಟ್ಟಿನಲ್ಲಿ ಶ್ರಮಿಸಬೇಕು. ಇಂದಿನ  ಪೀಳಿಗೆಯವರಲ್ಲಿ ರಾಷ್ಟ್ರಾಭಿಮಾನವು ಮತ್ತಷ್ಟು ಹೆಚ್ಚಾಗಬೇಕು. ಅದು ಮುಂದಿನ ಪೀಳಿಗೆಗಳಿಗೆ  ಹಸ್ತಾಂತರವಾಗಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗದಿಂದ ಆರಂಭವಾದ 800 ಮೀಟರ್ ಬೃಹತ್ ರಾಷ್ಟ್ರ ಧ್ವಜ ಮೆರವಣಿಗೆಯು‌, ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಜೂನಿಯರ್‌ ಕಾಲೇಜು ಮುಂಭಾಗದ ಬಲಮುರಿ ವೃತ್ತದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ನೂರಾರು ವಿದ್ಯಾರ್ಥಿಗಳು ಧ್ವಜವನ್ನು ಹೊತ್ತು ಹೆಜ್ಜೆ ಹಾಕಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಮೆರವಣಿಗೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...