ಚಾಮರಾಜನಗರ ಜಿಲ್ಲೆಯಲ್ಲಿ 2023ರಲ್ಲಿ 83 ಪೋಕ್ಸೋ ಪ್ರಕರಣ ದಾಖಲು

Date:

ಚಾಮರಾಜನಗರ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆ 2023ರಲ್ಲಿ ಹೆಚ್ಚಾಗಿದೆ. ಆ ವರ್ಷ 83 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. 2022ಕ್ಕೆ ಹೋಲಿಸಿದರೆ, 2023ರಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಪೊಲೀಸ್ ಇಲಾಖೆಯ ದಾಖಲೆಗಳು ತಿಳಿಸಿವೆ.

ಚಾಮರಾಜನಗರ ಜಿಲ್ಲೆಯಲ್ಲಿ 2022ರಲ್ಲಿ 48 ಪ್ರಕರಣಗಳು ದಾಖಲಾಗಿದ್ದವು. ಆದರೆ, ಕಳೆದ ವರ್ಷ 83 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಪೈಕಿ, 75 ಆರೋಪಿಗಳನ್ನು ಬಂಧಿಸಲಾಗಿದೆ. ಆರು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಎಂದು ಇಲಾಖೆಯ ದಾಖಲೆಗಳು ಹೇಳಿವೆ.

2023ರಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಾಲ್ಯ ವಿವಾಹ ಸಂಬಂಧ 38 ಪ್ರಕರಣಗಳು ದಾಖಲಾಗಿವೆ ಎಂದು ದಾಖಲೆಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಮೇಲಿನ ಅಪರಾಧಗಳ ತಡೆಗಾಗಿ ಪೋಕ್ಸೋ ಕಾಯ್ದೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರಿ ಹಾಗೂ ಪೊಲೀಸ್‌ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಅದಾಗಿಯೂ, ಮಕ್ಕಳ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.

“ಬಾಲಕಿಯರ ಮೇಲೆ ದೌರ್ಜನ್ಯ, ಬಾಲ್ಯ ವಿವಾಹ ಪ್ರಕರಣಗಳನ್ನು ಮುಚ್ಚಿಟ್ಟಿದ್ದ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ. ಪೋಕ್ಸೊ ಪ್ರಕರಣಗಳಲ್ಲಿ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸುತ್ತೇವೆ. ತ್ವರಿತವಾಗಿ ವಿಚಾರಣೆಗಳು ನಡೆಯುತ್ತವೆ” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...