ಕೊಪ್ಪಳ | ಎರಡೇ ಬಲ್ಬ್ ಇರುವ ತಗಡಿನ ಮನೆಗೆ 1 ಲಕ್ಷ ರೂ. ವಿದ್ಯುತ್‌ ಬಿಲ್; ವೃದ್ಧೆ ಕಣ್ಣೀರು

Date:

ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಮತ್ತೊಂದೆಡೆ ದುಪ್ಪಟ್ಟು ವಿದ್ಯುತ್ ದರ ಏರಿಕೆ ನೋಡಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಕೊಪ್ಪಳದ ವೃದ್ಧೆಯೊಬ್ಬರಿಗೆ 1 ಲಕ್ಷ ರೂಪಾಯಿ ವಿದ್ಯುತ್‌ ಬಿಲ್ ಬಂದಿದ್ದು, ವೃದ್ಧೆ ತಬ್ಬಿಬ್ಬಾಗಿದ್ದಾರೆ.

ಕೊಪ್ಪಳದ ಭಾಗ್ಯ ನಗರದಲ್ಲಿ ಗಿರಿಜಮ್ಮ ಎಂಬುವವರಿಗೆ ಜೆಸ್ಕಾಂನಿಂದ ಒಂದು ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ. ಪ್ರತಿ ತಿಂಗಳು 70 ರಿಂದ 80 ರೂ. ಬರ್ತಿದ್ದ ಬಿಲ್ ಈಗ ದಿಢೀರನೆ 1 ಲಕ್ಷ ಬಂದಿದ್ದು, ವಿದ್ಯುತ್‌ ಬಿಲ್‌ ನೋಡಿ ಅಜ್ಜಿ ಮತ್ತು ಅವರ ಮಗ ಶಾಕ್ ಆಗಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವ ನಮಗೆ ಇದೆಂತ ಶಿಕ್ಷೆ ಎಂದು ಅಜ್ಜಿ ಕಣ್ಣೀರಿಟ್ಟಿದ್ದಾರೆ.

90 ವರ್ಷದ ಗಿರಿಜಮ್ಮ ಅವರು ಮಗನೊಂದಿಗೆ ವಾಸವಿದ್ದಾರೆ. ಮಗ ಕೂಲಿ ಕೆಲಸಕ್ಕೆ ಹೋಗುತ್ತಾನೆ. ಸಣ್ಣ ತಗಡಿನ ಶೆಡ್​ನಿಂದ ಮನೆ ಮಾಡಿಕೊಳ್ಳಲಾಗಿದ್ದು, ಎರಡೇ ಎರಡು ಬಲ್ಬ್‌ಗಳು ಇವೆ. ಆದರೆ, ಈ ಬಾರಿ ಜೆಸ್ಕಾಂ ಬರೋಬ್ಬರಿ 1,03,315 ರೂ. ಬಿಲ್ ನೀಡಿ ಶಾಕ್ ನೀಡಿದೆ. ಅಜ್ಜಿ ಮನೆಗೆ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಮೀಟರ್ ಅಳವಡಿಸಿದ ಬಳಿಕ ಕರೆಂಟ್ ಬಿಲ್ ಲಕ್ಷಕ್ಕೆ ಏರಿದೆ. ಆರು ತಿಂಗಳ ಹಿಂದೆ ಜೆಸ್ಕಾಂ ಸಿಬ್ಬಂದಿ ವೃದ್ದೆಯ ಮನೆಗೆ ಮೀಟರ್ ಅಳವಡಿಸಿದ್ದರು. 6 ತಿಂಗಳಲ್ಲಿ ವಿದ್ಯುತ್ ಬಿಲ್ 1 ಲಕ್ಷ ದಾಟಿದೆ. ಒಂದೊತ್ತಿನ ಊಟಕ್ಕೆ ಪರದಾಡೋ ಅಜ್ಜಿಗೆ ಲಕ್ಷ ಬಿಲ್ ಬಂದಿರುವುದರಿಂದ ಅಜ್ಜಿ ಬಿಲ್ ಕಟ್ಟುವುದು ಹೇಗೆ ಎಂದು ಕಣ್ಣೀರು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ; ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಅಜ್ಜಿ ಮನೆಗೆ ಜೆಸ್ಕಾಂ ಅಧಿಕಾರಿಗಳ ಭೇಟಿ; ಪರಿಶೀಲನೆ

ಕೊಪ್ಪಳದಲ್ಲಿ ವೃದ್ಧೆ ಮನೆಗೆ 1 ಲಕ್ಷ ರೂ. ವಿದ್ಯುತ್‌ ಬಿಲ್‌​ ಬಂದಿದ್ದು, ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಜೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜೇಶ್​​ ಭೇಟಿ ಪರಿಶೀಲನೆ ನಡೆಸಿದರು.

“2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಮತ್ತು ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ” ಎಂದು ರಾಜೇಶ್​​ ಸ್ಪಷ್ಟನೆ ನೀಡಿದ್ದಾರೆ.

ಕರೆಂಟ್​​​ ಬಿಲ್​ ಕಟ್ಟಬೇಕಿಲ್ಲ ಎಂದಿದ್ದಕ್ಕೆ ವೃದ್ಧೆ ಗಿರಿಜಮ್ಮ ಜೆಸ್ಕಾಂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಅಜ್ಜಿ 1 ಲಕ್ಷ ರೂ. ವಿದ್ಯುತ್‌ ಬಿಲ್​ ಕಟ್ಟಬೇಕಿಲ್ಲ; ಇಂಧನ ಸಚಿವ ಕೆ ಜೆ ಜಾರ್ಜ್

ಈ ಕುರಿತು ಇಂಧನ ಸಚಿವ ಕೆ ಜೆ ಜಾರ್ಜ್ ಖಾಸಗಿ ಸುದ್ದಿವಾಹಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, “ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ. ಹಿಂದಿನ ಸರ್ಕಾರವಿದ್ದಾಗ ಕೆಇಆರ್‌ಸಿ ವಿದ್ಯುತ್​ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್​ ಸಂಗ್ರಹ ಮಾಡಲು ಹೇಳಿದ್ದಾರೆ. ಒಂದೇ ಬಾರಿ ಎರಡು ತಿಂಗಳ ವಿದ್ಯುತ್ ದರ​ ಏರಿಕೆಯ ಬಿಲ್​​ ಬಂದಿದೆ. ನಮ್ಮ ಸಾಫ್ಟ್​​ವೇರ್ ಹಳೆಯದು, ಹೊಸ ಸಾಫ್ಟ್​​ವೇರ್​​​ ಹಾಕಬೇಕು. ಕೆಲವೆಡೆ ಮೀಟರ್​ ಸಮಸ್ಯೆಯಿಂದ ವಿದ್ಯುತ್​ ದರ ಹೆಚ್ಚಳ ಆಗಿದೆ. ಕೊಪ್ಪಳದಲ್ಲೂ ಅಜ್ಜಿ ಮನೆಗೆ ಮೀಟರ್​ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಅಜ್ಜಿ‌ ಅಷ್ಟೊಂದು ಕರೆಂಟ್​​ ಬಿಲ್​​ ಕಟ್ಟಬೇಕಿಲ್ಲ” ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...