ಬೀದರ್‌ | ವೃದ್ಧಾಪ್ಯ ವೇತನ, ಅನ್ನಭಾಗ್ಯ ಸಿಗದೆ ವೃದ್ಧೆ ಪರದಾಟ

Date:

ಅಧಿಕಾರಿಗಳ ನಿರ್ಲಕ್ಷದಿಂದ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ವೃದ್ಧೆಯೊಬ್ಬರು ಸಂಕಷ್ಟದ ಬದುಕು ದೂಡುತ್ತಿದ್ದಾರೆ.

ಬೀದರ್‌ ತಾಲೂಕಿನ ಮನ್ನಳ್ಳಿ ಹೋಬಳಿಯ ನಾಗೋರಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಮಿರ್ಜಾಪುರ(ಟಿ) ಗ್ರಾಮದ 72 ವರ್ಷದ ವೃದ್ಧೆ ನಾಗಮ್ಮ ಶಂಕರೆಪ್ಪ ಭಂಡೆ ಎಂಬುವವರು ನಡೆಯಲು ಆಗದೆ, ಸರಿಯಾಗಿ ಕಣ್ಣು ಕಾಣಿಸದೆ ಸರ್ಕಾರದ ನೆರವಿಗಾಗಿ ಎದುರು ನೋಡುತ್ತಿದ್ದಾರೆ.

ಅಜ್ಜಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಗಂಡ ತೀರಿಹೋದ ಬಳಿಕ ಸದ್ಯ ಕಿರಿಯ ಮಗನ ಮನೆಯಲ್ಲಿ ವಾಸವಾಗಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಚೀಟಿ ಹೊಂದಿದ್ದಾರೆ. ಆದರೆ ಕುಟುಂಬದ ಪಡಿತರ ಚೀಟಿಯಲ್ಲಿ ಇವರ ಹೆಸರಿಲ್ಲ. ಅಧಿಕಾರಿಗಳನ್ನು ಕೇಳಿದರೆ ನಿರ್ಲಕ್ಷ್ಯ ತೋರಿದ್ದಾರೆ. ಇಲ್ಲಿಯವರೆಗೆ ಯಾರೊಬ್ಬ ಅಧಿಕಾರಿಗಳೂ ಇತ್ತ ತಿರುಗಿ ನೋಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಡಿದು ತಿನ್ನಲು ಶಕ್ತಿ ಇಲ್ಲದೇ ಬದುಕು ಸಾಗಿಸುತ್ತಿರುವ ನಾಗಮ್ಮಗೆ ಅನ್ನಭಾಗ್ಯ ಪಡಿತರ ಚೀಟಿಯೂ ಇಲ್ಲ. ಇನ್ನು ವಿಧವಾ ವೇತನ, ವೃದ್ಯಾಪ್ಯ ವೇತನ ಹಣ ಕೂಡ ಬರುವುದಿಲ್ಲ. ಈಗಿನ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದ ಕಾರಣ ಪರದಾಡುವಂತಾಗಿದೆ.

ಈ ಬಗ್ಗೆ ಅಜ್ಜಿಯ ಮಗ ಪ್ರಭು ಭಂಡೆ ಈದಿನ.ಕಾಮ್‌ ಜೊತೆ ಮಾತನಾಡಿ, ʼಹಲವು ಸಲ ಅಧಿಕಾರಿಗಳಿಗೆ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇರೆ ಯಾವುದೇ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ತೆರಳಿದರೆ ಅಲ್ಲಿನ ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ. ಹೀಗಾಗಿ ಬೇಸತ್ತು ಅರ್ಜಿ ಹಾಕುವುದೇ ಬಿಟ್ಟಿದ್ದೇವೆ. ಈಗಲಾದರೂ ತಾಲೂಕು ಆಡಳಿತ ಸಹಾಯಕ್ಕೆ ಧಾವಿಸಬೇಕುʼ ಎಂದು ಅವಲತ್ತುಕೊಂಡಿದ್ದಾರೆ.

ಬೀದರ್‌ ತಹಸೀಲ್ದಾರ್‌ ದಿಲಶಾದ್ ಮಹಾತ್‌ ಅವರನ್ನು ಈ ಕುರಿತು ಈದಿನ.ಕಾಮ್‌ ವಿಚಾರಿಸಿದಾಗ, ʼಈ ವಿಷಯ ನನ್ನ ಗಮನಕ್ಕೆ ಇಲ್ಲವೆಂದು ಅಜ್ಜಿಯ ಪೂರ್ಣ ವಿಳಾಸದ ಮಾಹಿತಿ ಪಡೆದು, ಇವತ್ತೇ ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಕ್ಕೆ ಭೇಟಿ ನೀಡಿ ಅಜ್ಜಿಯ ಮಾಹಿತಿ ಸಂಗ್ರಹಿಸಲು ತಿಳಿಸುವೆʼ ಎಂದು ಭರವಸೆ ನೀಡಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...