ಕಲಬುರಗಿ | ಜೈಲಿನಿಂದ ಬಿಡುಗಡೆಯಾದ 93 ವರ್ಷದ ವೃದ್ಧೆ ಖೈದಿ ಮನೆಯಲ್ಲಿ ನಿಧನ

Date:

ಸೊಸೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪೇರೋಲ್‌ ಮೇಲೆ ಬಿಡುಗಡೆಯಾಗಿದ್ದ ಜೇವರ್ಗಿ ಪಟ್ಟಣದ ವೃದ್ಧೆ ಖೈದಿ ನಾಗಮ್ಮ ಅಣ್ಣಾರಾವ್‌ (93) ಶುಕ್ರವಾರ ಮನೆಯಲ್ಲಿಯೇ ನಿಧನರಾಗಿದ್ದಾರೆ.

ನ.16ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲೆಗೆ ಆಗಮಿಸಿದ್ದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ವೃದ್ಧೆ ನಾಗಮ್ಮ ಅವರನ್ನು ಭೇಟಿ ಮಾಡಿದ್ದರು. ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದ ನಾಗಮ್ಮ ಅವರ ಸ್ಥಿತಿಯನ್ನು ಕಂಡು ಉಪಲೋಕಾಯುಕ್ತರು ಮರುಗಿದ್ದರು. ತಕ್ಷಣವೇ ಕಾನೂನು ಸೇವಾ ಪ್ರಾಧಿಕಾರಕ್ಕೆ ಕರೆ ಮಾಡಿ ಮಹಿಳೆಯ ಶಿಕ್ಷೆ ಪ್ರಮಾಣ ಕಡಿತಗೊಳಿಸಿ ಬಿಡುಗಡೆಗೊಳಿಸಲು ಮೇಲ್ಮನವಿ ಸಲ್ಲಿಸಲು ಉಪಲೋಕಾಯುಕ್ತರು ಸಲಹೆ ನೀಡಿದ್ದರು.

ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಲಬುರಗಿ ಎಸ್ಪಿ ಅವರಿಗೆ ವೃದ್ಧೆಯನ್ನು ಪೆರೋಲ್‌ ಮೇಲೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ನ.28ರಂದು ವೃದ್ಧೆಗೆ ಒಂದು ತಿಂಗಳ ಪೆರೋಲ್‌ ಮಂಜೂರಾಗಿದ್ದರಿಂದ ಅವರ ಇಬ್ಬರು ಹೆಣ್ಣು ಮಕ್ಕಳು ಬಂದು ಮನೆಗೆ ಕರೆದುಕೊಂಡು ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಸಾವಿನ ಕೊನೆ ಕ್ಷಣದಲ್ಲಿ ಮನೆ ಸೇರಬೇಕೆಂದು ಕೋರಿಕೆ ಇಟ್ಟಿದ್ದ 93 ವರ್ಷದ ವೃದ್ಧೆಯ ಕೊನೆ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದಾರೆ. ಆದರೆ ಮನೆಗೆ ತೆರಳಿದ ವಾರದ ಬಳಿಕ ವೃದ್ಧೆ ನಾಗಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆ ಮೂಲಕ ಅಂತಿಮ ಕ್ಷಣ ಮನೆಯಲ್ಲಿ ಕಳೆಯಬೇಕೆಂಬ ಅವರ ಆಸೆಯನ್ನು ಈಡೇರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...