ಬೀದರ್‌ | ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಬೈಕ್ ಢಿಕ್ಕಿ; ಖಾಸಗಿ ಶಾಲೆ ಶಿಕ್ಷಕ ಸಾವು

Date:

ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯ ವನಮಾರಪಳ್ಳಿ ಗ್ರಾಮದ ಬಳಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದ ಬಾಬುರಾವ್ ಶಂಕರ ವಾಘಮಾರೆ(42) ಎಂಬುವರು ಮೃತಪಟ್ಟಿದ್ದಾರೆ.

ಔರಾದ್‌ನಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿದ್ದ ಟ್ರ್ಯಾಕ್ಟರ್ ಕೆಟ್ಟು ಹೋದ ಪರಿಣಾಮ ಟ್ರೈಲರ್‌‌  ಒಂದನ್ನೇ ರಸ್ತೆ ಮೇಲೆ ನಿಲ್ಲಿಸಿದ್ದರು. ಔರಾದ್‌ನಿಂದ ಊರಿಗೆ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಟ್ರೈಲರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಬೀದರ್‌ ಬ್ರಿಮ್ಸ್‌ಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶೋಷಿತರ ಸಮಾವೇಶ: ಚಿತ್ರದುರ್ಗದಲ್ಲಿ ಅಹಿಂದ ಶಕ್ತಿ ಪ್ರದರ್ಶನ

ಔರಾದ್ ಪೊಲೀಸ್‌ ಠಾಣೆ ಪೊಲೀಸರು‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳುತ್ತೇವೆಂದು ಈ ದಿನ.ಕಾಮ್‌ ಜತೆಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...