ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

Date:

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ ಸದಸ್ಯರು, ವಿವಿಧ ಸಂಘಟನೆಗಳು ಧರಣಿ ನಡೆಸಿದರು.

ನಗರಸಭೆ ಕಚೇರಿ ಮುಂಭಾಗ ಪ್ರತಿಭಟಿಸಿ ಬಾಲಕನ ಸಾವಿಗೆ ನಗರಸಭೆ ಪೌರಾಯುಕ್ತರ ನಿರ್ಲಕ್ಷ್ಯದಿಂದ ಬಾಲಕ ಜೀವ ಹೋಗಿದೆ. ನೀರಿನ ಹೊಂಡ ಇರುವ ಬಗ್ಗೆ 15 ದಿನಗಳ ಮುಂಚೆಯೇ ಪೌರಾಯುಕ್ತರ ಗಮನಕ್ಕೆ ತರಲಾಗಿತ್ತು. ಗುಂಡಿ ಮುಚ್ಚಲು ತಿಳಿಸಿದರೂ ಕ್ಯಾರೇ ಎನ್ನಲಿಲ್ಲʼ ಎಂದು ಕಿಡಿಕಾರಿದರು.

ಕಳೆದ ಶುಕ್ರವಾರ ಮಧ್ಯಾಹ್ನ ಬಾಲಕ ವಿರಾಟ್ ಆಟವಾಡಲು ಮನೆಯಿಂದ ಹೊರ ಹೋದ ಬಳಿಕ ಮನೆಗೆ ವಾಪಸ್‌ ಬರಲಿಲ್ಲ. ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಾಡಿದರು ಸುಳಿವು ಸಿಗಲಿಲ್ಲ. ಬಳಿಕ ಬಾಲಕ ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟಿರುವುದು ದೃಢವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...